ನವದೆಹಲಿ: ಪಶ್ಚಿಮ ಬಂಗಾಳದಲ್ಲಿನ ಚುನಾವಣಾ ಪ್ರಚಾರ ತೆರೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಿಯೋಗ ಇಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ, ಚುನಾವಣಾ ಆಯೋಗದಿಂದ ಅತೃಪ್ತಿಕರ ಪ್ರತಿಕ್ರಿಯೆಯನ್ನು ಪಡೆದಿರುವುದಾಗಿ ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ವೇಳೆಯಲ್ಲಿ ಸಂಭವಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂದು ರಾತ್ರಿ 10 ಗಂಟೆಯಿಂದ ಪಶ್ಚಿಮ ಬಂಗಾಳದಲ್ಲಿನ 9 ಲೋಕಸಭಾ ಕ್ಷೇತ್ರಗಳಲ್ಲಿ ಎಲ್ಲಾ ಪಕ್ಷಗಳಿಗೂ ಚುನಾವಣಾ ಪ್ರಚಾರವನ್ನು ಅಂತ್ಯಗೊಳಿಸಿದೆ.
ಚುನಾವಣಾ ಆಯೋಗದ ನಿರ್ಧಾರಕ್ಕೆ ಟಿಎಂಸಿ, ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.
Advertisement