ಅಂತಿಮ ಹಂತದ ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರೆ

ಮೇ 19 ರಂದು ನಡೆಯಲಿರುವ ಆರು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ 59 ಲೋಕಸಭಾ ಕ್ಷೇತ್ರಗಳ ಅಂತಿಮ ಹಂತದ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಇಂದು ತೆರೆ ಬಿದಿದ್ದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮೇ 19 ರಂದು ನಡೆಯಲಿರುವ ಆರು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ 59 ಲೋಕಸಭಾ ಕ್ಷೇತ್ರಗಳ ಅಂತಿಮ ಹಂತದ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಇಂದು ತೆರೆ ಬಿದಿದ್ದೆ. ಈ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ರೋಡ್ ಶೋ ವೇಳೆಯಲ್ಲಿ  ಕೋಲ್ಕತ್ತಾದಲ್ಲಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ  ಒಂದು ದಿನ ಮುಂಚಿತವಾಗಿಯೇ ಗುರುವಾರ ರಾತ್ರಿಯೇ ಚುನಾವಣಾ ಆಯೋಗ ಪ್ರಚಾರವನ್ನು ಅಂತ್ಯಗೊಳಿಸಿತ್ತು.

ಏಳನೇ ಹಂತದಲ್ಲಿ ಉತ್ತರ ಪ್ರದೇಶದ 13 ಕ್ಷೇತ್ರ, ಪಂಜಾಬಿನ ಎಲ್ಲಾ 13, ಪಶ್ಚಿಮ ಬಂಗಾಳದ 9, ಬಿಹಾರ ಹಾಗೂ ಮಧ್ಯಪ್ರದೇಶದಲ್ಲಿ ತಲಾ 8, ಹಿಮಾಚಲ ಪ್ರದೇಶದಲ್ಲಿ ಎಲ್ಲಾ 4 ,ಜಾರ್ಖಂಡ್  3 ಹಾಗೂ ಛತ್ತೀಸ್ ಗಢದ ಒಂದು ಕ್ಷೇತ್ರದಲ್ಲಿ  ಚುನಾವಣೆ ನಡೆಯಲಿದೆ. ಕೊನೆಯ ಹಂತದ ಚುನಾವಣೆಯಲ್ಲಿ ಒಟ್ಟು 918 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ, ಪಂಜಾಬಿನ ಮಾಜಿ ಉಪ ಮುಖ್ಯಮಂತ್ರಿ ಸುಖ್ಬೀರ್ ಬಾದಲ್   ಹಾಗೂ ಅವರ ಪತ್ನಿ ಹರ್ಸಿಮ್ರತ್ ಕೌರ್ ಬಾದಲ್,  ಮತ್ತೋರ್ವ ಕೇಂದ್ರ ಸಚಿವ ಹರ್ದೀಪ್ ಪುರಿ, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪತ್ನಿ ಪ್ರಣೀತಾ ಕೌರ್, ಅನುರಾಗ್ ಠಾಕೂರ್, ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಸಿಬು ಸೂರೆನ್, ಮತ್ತಿತರ ರಾಜಕೀಯ ಭವಿಷ್ಯ ಈ ಹಂತದಲ್ಲಿ ನಿರ್ಧಾರವಾಗಲಿದೆ.

ಈ ಚುನಾವಣೆಯಲ್ಲಿ ಎನ್ ಡಿಎ ಹಾಗೂ ಬಿಜೆಪಿ 300 ಕ್ಷೇತ್ರಗಳಲ್ಲಿ ಗೆಲ್ಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಆದರೆ, ಮೋದಿ ದಾರಿ ಅಷ್ಟು ಸುಲಭವಾಗಿಲ್ಲ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಮೇ 23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com