ದೇಶ

ಕೇದಾರನಾಥ,ಬದರೀನಾಥ ದೇಗುಲಗಳಿಗೆ ಭೇಟಿ ನೀಡಲು ಮೋದಿಗೆ ಆಯೋಗದ ಅನುಮತಿ

ಕೇದಾರನಾಥ,ಬದರೀನಾಥ ದೇಗುಲಗಳಿಗೆ ಭೇಟಿ ನೀಡಲು ಮೋದಿಗೆ ಆಯೋಗದ ಅನುಮತಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ತಪ್ಪಲಿನ ಕೇದಾರ್ ನಾಥ ಹಾಗೂ ಬದರೀನಾಥ ದೇವಾಲಯಗಳಿಗೆ ಭೇಟಿ ನೀಡಲು ಚುನಾವಣಾ ಆಯೋಗ ಅನುಮತಿ ನೀಡಿದೆ.  ಮಾದರಿ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ ಎಂದು ಪ್ರಧಾನಿ ಕಚೇರಿಗೆ ಸೂಚಿಸಿದೆ

ಉತ್ತರಖಂಡಕ್ಕೆ ಮೋದಿಯ ಎರಡು ದಿನಗಳ ಅಧಿಕೃತ ಭೇಟಿಗೆ ಚುನಾವಣಾ ಆಯೋಗದ ಅಭಿಪ್ರಾಯಗಳನ್ನು ಪ್ರಧಾನಿ ಕಚೇರಿ ಕೇಳಿತ್ತು.

ಮಾರ್ಚ್ 10 ರಂದು ಜಾರಿಗೆ ಬಂದಿರುವ ಮಾದರಿ ನೀತಿ ಸಂಹಿತೆ ಚುನಾವಣಾ ಫಲಿತಾಂಶ ಘೋಷಣೆಯಾಗುವವರೆಗೂ ಜಾರಿಯಲ್ಲಿರುತ್ತದೆ ಎಂದು ಚುನಾವಣಾ ಆಯೋಗ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ತಿಳಿಸಿದೆ ಎಂಬುದು ತಿಳಿದುಬಂದಿದೆ.

ಮೇ 19 ರಂದು ಏಳನೇ ಹಂತದ ಚುನಾವಣೆ ನಡೆಯಲಿದೆ. ಪ್ರಧಾನಿ ಅಧಿಕೃತ ಭೇಟಿಯಾದ್ದರೆ ಅದನ್ನು ಕೈಗೊಳ್ಳಬಹುದು, ಆದರೆ, ಮಾದರಿ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ ಎಂಬುದನ್ನು ಮನದಲ್ಲಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ.

ಇಂದಿನಿಂದ ಉತ್ತರಖಂಡ್ ರಾಜ್ಯಕ್ಕೆ ಮೋದಿ ಭೇಟಿ ನೀಡಲಿದ್ದಾರೆ. ಇಂದು ಕೇದಾರ್ ನಾಥ್ , ನಾಳೆ ಬದರೀನಾಥ್ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.