ಸಾಂದರ್ಭಿಕ ಚಿತ್ರಗಳು
ಸಾಂದರ್ಭಿಕ ಚಿತ್ರಗಳು

ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಎನ್ ಡಿಎ ನಾಯಕರಿಗೆ ಅಮಿತ್ ಶಾ ಔತಣಕೂಟ!

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಮುನ್ನ ಅಂದರೆ ನಾಳೆ ಎನ್ ಡಿಎ ನಾಯಕರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೋಜನ ಕೂಟ ಆಯೋಜಿಸಿದ್ದಾರೆ.
Published on

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಮುನ್ನ ಅಂದರೆ ನಾಳೆ ಎನ್ ಡಿಎ ನಾಯಕರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೋಜನ ಕೂಟ ಆಯೋಜಿಸಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಗೆ ಮುಂಚಿತವಾಗಿಯೇ ನಾಳೆ ಅಮಿತ್ ಶಾ ಔತಣಕೂಟ ಆಯೋಜಿಸಿದ್ದು, ಎನ್ ಡಿಎಯ ಪ್ರಮುಖ ನಾಯಕರನ್ನು ಆಹ್ವಾನಿಸಿದ್ದಾರೆ ಎಂಬುದು ತಿಳಿದುಬಂದಿದೆ. ಕೇಂದ್ರ ಸಚಿವರು ಕೂಡಾ ಈ ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

 ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮತ್ತೆ ಸರ್ಕಾರ ರಚಿಸಲಿದೆ  ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.
ಇದು ಸಂಪೂರ್ಣ ಚಿತ್ರಣವನ್ನು ನೀಡಿದೆ ಎಂದು ಬಿಜೆಪಿ ಹಾಗೂ ಅದರ ಅಂಗಪಕ್ಷಗಳು ಹೇಳುತ್ತಿದ್ದರೆ, ಪ್ರತಿಪಕ್ಷಗಳು ಸುಳ್ಳು ಎಂದು ಹೇಳುತ್ತಿವೆ.  ಒಟ್ಟಾರೇ ಮೇ 23ರಂದು ಫಲಿತಾಂಶ ಬಗ್ಗೆ ಇರುವ ಎಲ್ಲಾ ಊಹಾಪೋಹಗಳಿಗೂ ತೆರೆ ಬೀಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com