ಮುಂದಿನ ಐದು ವರ್ಷ ಜನ ಮೆಚ್ಚುವಂತಹ ಕೆಲಸ ಮಾಡಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಶುಭಾಶಯ

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿ, ಎನ್ ಡಿಎ ಮೈತ್ರಿಕೂಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿ, ಎನ್ ಡಿಎ ಮೈತ್ರಿಕೂಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ.
ಲೋಕಸಭಾ ಚುನಾವಣಾ ಫಲಿಂತಾಶ ಪ್ರಕಟವಾದ ಬೆನ್ನಲ್ಲೇ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, 'ಸೋಲು-ಗೆಲುವುಗಳು ರಾಜಕೀಯ ಜೀವನದ ಅವಿಭಾಜ್ಯ ಅಂಗ. ಇದೇ ಪ್ರಜಾಪ್ರಭುತ್ವದ ಸೌಂದರ್ಯ. ನಮ್ಮ ಪಕ್ಷದ ಸೋಲು ಅನಿರೀಕ್ಷಿತವಾಗಿದ್ದರೂ ಜನಾಭಿಪ್ರಾಯಕ್ಕೆ ತಲೆ ಬಾಗಿ ವಿನಯಪೂರ್ವಕವಾಗಿ ಸ್ವೀಕರಿಸಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ ಮತದಾರ ಬಂಧುಗಳಿಗೆ ಅಭಿನಂದನೆಗಳು. ರಾಜ್ಯದಿಂದ ಆಯ್ಕೆಯಾದ ಎಲ್ಲ ಸಂಸದರೂ ಚುನಾವಣೆ ಮುಗಿದ ಮೇಲೆ ಪಕ್ಷಾತೀತವಾಗಿ ನಮ್ಮ ರಾಜ್ಯದ ಪ್ರತಿನಿಧಿಗಳಾಗಿರುತ್ತಾರೆ. ಅವರೆಲ್ಲರಿಗೂ ಅಭಿನಂದನೆಗಳು. ಲೋಕಸಭೆಯಲ್ಲಿ ರಾಜ್ಯದ ದನಿ ಕೇಳಿಸುವಂತೆ ಮತ್ತು ಹಿತರಕ್ಷಿಸುವಂತೆ ಅವರೆಲ್ಲರೂ ಕೆಲಸ ಮಾಡಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಅಂತೆಯೇ ಪ್ರಧಾನಿ ಮೋದಿ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, 'ಈ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಮತ್ತು ಮುಖ್ಯಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮುಂದಿನ ಐದು ವರ್ಷ ಜನ ಮೆಚ್ಚುವಂತಹ, ಇಡೀ ದೇಶವನ್ನು ಕುವೆಂಪು ಅವರು ಹೇಳಿರುವಂತೆ 'ಸರ್ವಜನಾಂಗದ ಶಾಂತಿಯ ತೋಟ'ವನ್ನಾಗಿ ಮಾಡುವ ರೀತಿಯಲ್ಲಿ ಆಡಳಿತ ನೀಡಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com