ಬಿಜೆಪಿ ಸೂಪರ್ ಗೆಲುವಿಗೆ ಮೋದಿ ಸೂಪರ್ ಹಿರೋ- ಅಮಿತ್ ಶಾ

17ನೇ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಸೂಪರ್ ಗೆಲುವಿಗೆ ಮೋದಿ ಸೂಪರ್ ಹಿರೋಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಣ್ಣಿಸಿದ್ದಾರೆ.
ಮೋದಿ, ಅಮಿತ್ ಶಾ
ಮೋದಿ, ಅಮಿತ್ ಶಾ
Updated on: 

ನವದೆಹಲಿ:  17ನೇ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಸೂಪರ್ ಗೆಲುವಿಗೆ ಮೋದಿ ಸೂಪರ್ ಹಿರೋಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಣ್ಣಿಸಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಮಾಯಿಸಿದ್ದ ಸಹಸ್ರಾರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ,  17 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ  ಕಾಂಗ್ರೆಸ್ ದೊಡ್ಡ ಸೊನ್ನೆ ಸುತ್ತಿದೆ ಎಂದರು.

ಇದು ಜನರ ಗೆಲುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನೀತಿಗೆ ದೊರೆತ ವಿಜಯವಾಗಿದೆ. 17 ರಾಜ್ಯಗಳಲ್ಲಿ ಬಿಜೆಪಿ ಶೇ. 50 ರಷ್ಟು ಮತಗಳನ್ನು ಪಡೆದಿದೆ .ಜಾತಿ ಆಧಾರಿತ ರಾಜಕೀಯ ಸದ್ಯದಲ್ಲೇ ಅಂತ್ಯಗೊಳ್ಳಲಿದೆ. ಇದು ಜನರ ಪ್ರೀತಿಯ ಗೆಲುವು ಆಗಿದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಗೆ ಅವರಿಗೆ ಅದ್ದೂರಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನರೇಂದ್ರ ಮೋದಿ ಅವರನ್ನು ಅಮಿತ್ ಶಾ  ಅಭಿನಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com