ಲಕ್ಷಕ್ಕೂ ಅಧಿಕ ಮತಗಳಿಂದ ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗ್ಡೆ ಮುನ್ನಡೆ

ಉತ್ತರ ಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗ್ಡೆ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಅನಂತ್ ಕುಮಾರ್ ಹೆಗ್ಡೆ
ಅನಂತ್ ಕುಮಾರ್ ಹೆಗ್ಡೆ
Updated on: 
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗ್ಡೆ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಮೇ.23 ರಂದು 2019 ರ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಅನಂತ್ ಕುಮಾರ್ ಹೆಗ್ಡೆ 1 ಲಕ್ಷ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. 
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಆನಂದ್ ಆಸ್ನೋಟೀಕರ್ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸ್ಪರ್ಧಿಸಿದ್ದರು.
ರಾಜ್ಯದಲ್ಲಿ ಬಿಜೆಪಿ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಜೆಡಿಎಸ್ 1, ಕಾಂಗ್ರೆಸ್ 2 ಲೋಕಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com