ಲೋಕಸಭೆ: ಕಾಂಗ್ರೆಸ್ ಗೆ ಮತ್ತೆ ಪ್ರತಿಪಕ್ಷದ ನಾಯಕನ ಸ್ಥಾನ ಕೈ ತಪ್ಪುವ ಸಾಧ್ಯತೆ

ಕಳೆದ ಬಾರಿ ಕೇವಲ 44 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷದ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಈ ಬಾರಿ 52 ಸ್ಥಾನಗಳನ್ನು...
ನವದೆಹಲಿ: ಕಳೆದ ಬಾರಿ ಕೇವಲ 44 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್, ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷದ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಈ ಬಾರಿ 52 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಗೆ ಮತ್ತೆ ಪ್ರತಿಪಕ್ಷದ ಮಾನ್ಯತೆ ಕೈ ತಪ್ಪುವ ಸಾಧ್ಯತೆ ಇದೆ.
ಲೋಕಸಭೆಯಲ್ಲಿ ಅಧಿಕೃತ ಪ್ರತಿಪಕ್ಷದ ನಾಯಕನ ಸ್ಥಾನ ಪಡೆಯಲು ಕನಿಷ್ಠ 55 ಸದಸ್ಯರ ಅಗತ್ಯವಿದೆ. ಆದರೆ ಕಾಂಗ್ರೆಸ್ ಈ ಬಾರಿ ಕೇವಲ 52 ಸ್ಥಾನಗಳನ್ನು ಗೆದ್ದಿದ್ದರಿಂದ 2014ರ ಪರಿಸ್ಥಿತಿಯೇ ಮರುಕಳಿಸುವ ಸಾಧ್ಯತೆಗಳಿವೆ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಪ್ರಬಲ ಪ್ರತಿಪಕ್ಷವೇ ಇಲ್ಲದಂತಾಗಿದೆ.
ಕಳೆದ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ  ಪ್ರತಿಪಕ್ಷ ನಾಯಕನ ಸ್ಥಾನ ನೀಡುವಂತೆ ಆಗ್ರಹಿಸಿತ್ತು. ಆದರೆ ಸದನ ಒಟ್ಟಾರೆ ಸಂಖ್ಯೆಯಲ್ಲಿ ಶೇ.10ರಷ್ಟು(55) ಸದಸ್ಯರು ಇಲ್ಲ ಎಂಬ ಕಾರಣಕ್ಕೆ ಸ್ಪೀಕರ್ ಪ್ರತಿಪಕ್ಷದ ನಾಯಕನ ಮಾನ್ಯತೆ ನೀಡಲು ನಿರಾಕರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com