ಮೇ 30 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎರಡನೇ ಬಾರಿಗೆ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ. ಈ ಮಧ್ಯೆ ಮೇ 25 ರಂದು ಎನ್ ಡಿಎ ಸಭೆ ನಡೆಯಲಿದೆ.ಈ ಸಭೆಯಲ್ಲಿ ಎನ್ ಡಿಎ ಮೈತ್ರಿಕೂಟದ ನೂತನ ಸಂಸದರು ಔಪಚಾರಿಕವಾಗಿ ಮೋದಿ ಅವರನ್ನು ನಾಯಕನಾಗಿ ಆಯ್ಕೆ ಮಾಡಲಿದ್ದಾರೆ ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸರ್ಕಾರ ರಚನೆಗೆ ಮೋದಿ ಅವರನ್ನು ಆಹ್ವಾನಿಸಲಿದ್ದಾರೆ.