ಗುಜರಾತ್‌ಗೆ ನಾಳೆ ಮೋದಿ ಭೇಟಿ; ತಾಯಿಯ ಆಶೀರ್ವಾದ ಪಡೆಯಲಿರುವ ಪ್ರಧಾನಿ

ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ.
ಭಾನುವಾರ ಮೋದಿ ಗುಜರಾತ್‌ಗೆ ಆಗಮಿಸಿ ಅವರ ತಾಯಿಯ ಆಶೀರ್ವಾದ ಪಡೆಯಲಿದ್ದಾರೆ. ತಾಯಿಯ ಆಶೀರ್ವಾದ ಪಡೆಯಲು ನಾಳೆ ಗುಜರಾತ್‌ಗೆ ಹೋಗುತ್ತಿದ್ದೇನೆ, ತಮ್ಮ ಮೇಲೆ ವಿಶ್ವಾಸವಿಟ್ಟು ಮತ್ತೊಮ್ಮೆ ಗೆಲ್ಲಿಸಿದ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಲು ನಾಡಿದ್ದು ಕಾಶಿಗೆ ಹೋಗುತ್ತಿದ್ದೇನೆ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.
ಎನ್‌ಡಿಎ ಸರ್ಕಾರದ ರಾಜೀನಾಮೆಯನ್ನು ಶುಕ್ರವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ ಮತ್ತು ಹೊಸದಾಗಿ ಪ್ರಮಾಣವಚನ ಸ್ವೀಕರಿಸುವವರೆಗೂ ಪ್ರಧಾನಿಯಾಗಿ ಮುಂದುವರಿಯುವಂತೆ ಸೂಚಿಸಿದ್ದಾರೆ.
ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಸಚಿವರ ಸಮಿತಿ ಮತ್ತು ನರೇಂದ್ರ ಮೋದಿ ಅಧಿಕಾರದಲ್ಲಿ ಮುಂದುವರಿಯುವಂತೆ ರಾಷ್ಟ್ರಪತಿ ಮನವಿ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ. ಪ್ರಧಾನ ಮಂತ್ರಿ ಕಡ್ಡಾಯ ನಿಯಮಗಳ ಪ್ರಕಾರ ತನ್ನ ಸರ್ಕಾರದ ರಾಜೀನಾಮೆಯನ್ನು ನೀಡಿದ್ದಾರೆ ಮತ್ತು ಹೊಸ ಸಚಿವಾಲಯ ರಚನೆಗೆ ದಾರಿ ಮಾಡಿಕೊಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com