ಚುನಾವಣೆ ಸೋಲು: ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಹುದ್ದೆ ತೊರೆಯಲು ಮುಂದಾದ ಕಮಲ್ ನಾಥ್

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕಮಲ್ ನಾಥ್
ಕಮಲ್ ನಾಥ್
ಭೋಪಾಲ್: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹುದ್ದೆಗೆ ಕಮಲ್ ನಾಥ್ರಾಜೀನಾಮೆ ಸಲ್ಲಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ ಎಂದು  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಹೇಳಿದರು. ರಾಜ್ಯದಲ್ಲಿ 29 ಸ್ಥಾನಗಳ ಪೈಕಿ 28 ಸ್ಥಾನಗಳನ್ನು ಬಿಜೆಪಿ ಗೆದ್ದಿದ್ದು ಚಿಂದ್ವಾರಾ ಕ್ಷೇತ್ರದಲ್ಲಿ ಮಾತ್ರ ಏಕೈಕ ಸ್ಥಾನವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.
ನಿನ್ನೆ ದೆಹಲಿಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೂ ಸಹ ಕಮಲ್ ನಾಥ್ ಗೈರಾಗಿದ್ದರು.ಮೂಲಗಳ ಪ್ರಕಾರ ತಮ್ಮ ಪಕ್ಷದ ಶಾಸಕರನ್ನು ಒಟ್ತಾಗಿರಿಸಲು ನಾಥ್ ಸಭೆಗೆ ಭಾಗಿಯಾಗದೆ ಕೈಬಿಟ್ಟಿದ್ದರು. 
"ಅವರು ಭೋಪಾಲ್ ನಲ್ಲಿ ಪಕ್ಷದ ಕೆಲಸದಲ್ಲಿ ಬ್ಯುಸಿಯಾಗಿದ್ದ ಕಾರಣ ಅವರು ಸಭೆಗೆ ಹಾಜರಾಗಿಲ್ಲ" ಎಂದು ಕಾಂಗ್ರೆಸ್ ಹೇಳಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಳ ಬಹುಮತದೊಡನೆ ಸರ್ಕಾರ ರಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com