ಟೈಮ್ಸ್ ನೌ-ವಿಎಂಆರ್ ಸಮೀಕ್ಷೆ; ಮೋದಿ ನೇತೃತ್ವದ ಎನ್ ಡಿಎಗೆ 279 ಸ್ಥಾನ, ಯುಪಿಎಗೆ 149 ಸ್ಥಾನ

ಟೈಮ್ಸ್ ನೌ-ವಿಎಂಆರ್ ಸಂಸ್ಥೆ ಮತದಾನ ಪೂರ್ವ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯಲ್ಲಿ ಮತ್ತೆ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಬಹುದು ಎಂದು ಹೇಳಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಹಾಲಿ ಲೋಕಸಭಾ ಚುನಾವಣಾ ಮತದಾನಕ್ಕೆ ಇನ್ನು ಕೇವಲ 3 ದಿನಗಳು ಬಾಕಿ ಇರುವಂತೆಯೇ ಟೈಮ್ಸ್ ನೌ-ವಿಎಂಆರ್ ಸಂಸ್ಥೆ ಮತದಾನ ಪೂರ್ವ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯಲ್ಲಿ ಮತ್ತೆ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಬಹುದು ಎಂದು ಹೇಳಲಾಗಿದೆ.
ಹೌದು.. ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ ಮೂರು ದಿನಗಳು ಬಾಕಿ ಇರುವಂತೆಯೇ ಟೈಮ್ಸ್ ನೌ ಮತ್ತು ವಿಎಂಆರ್ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು ಅದರ ವರದಿ ಬಿಡುಗಡೆ ಮಾಡಿದೆ. ಸೋಮವಾರ ಸಂಜೆ ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಮಾರ್ಚ್ 22 ರಿಂದ ಏಪ್ರಿಲ್ 4ರವರೆಗೂ ಸಮೀಕ್ಷೆ ನಡೆಸಲಾಗಿದ್ದು, ದೇಶಾದ್ಯಂತ 960 ಪ್ರದೇಶಗಳಲ್ಲಿ 14,301 ಜನರಿಂದ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಾಗಿದೆ.
ಸಮೀಕ್ಷಾ ವರದಿಯಲ್ಲಿ ಯಾರಿಗೆ ಎಷ್ಟು ಸ್ಥಾನ?
ಇನ್ನು ಸಮೀಕ್ಷಾ ವರದಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ 279 ಸ್ಥಾನ ಲಭಿಸುವ ಸಾಧ್ಯತೆ ಇದ್ದು, ರಾಹುಲ್ ಗಾಂಧಿ ನೇತೃತ್ವದ ಯುಪಿಎ ಮೈತ್ರಿಕೂಟ 149 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಆ ಮೂಲಕ ಮತ್ತೆ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೂ ಈ ಬಾರಿಯ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಕಾಂಗ್ರೆಸ್ ವರ್ಚಸ್ಸು ಹಾಗೂ ಮತದಾನ ಪ್ರಮಾಣ ಹೆಚ್ಚಾಗಿದೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com