ಜನಸೇನಾ ಪಕ್ಷದ ಎಂಎಲ್ಎ ಅಭ್ಯರ್ಥಿಯಿಂದ ಇವಿಎಂ ಧ್ವಂಸ

ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಸ್ಥಾಪಿತ ಜನಸೇನಾ ಪಕ್ಷದ ಎಂಎಲ್ಎ ಅಭ್ಯರ್ಥಿ ಮತಗಟ್ಟೆ ಕೇಂದ್ರದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ) ಅನ್ನು ನೆಲಕ್ಕೆ ಎಸೆದು ಪುಡಿ ಪುಡಿ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಅಮರಾವತಿ: ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಸ್ಥಾಪಿತ ಜನಸೇನಾ ಪಕ್ಷದ ಎಂಎಲ್ಎ ಅಭ್ಯರ್ಥಿ ಮತಗಟ್ಟೆ ಕೇಂದ್ರದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ) ಅನ್ನು ನೆಲಕ್ಕೆ ಎಸೆದು ಪುಡಿ ಪುಡಿ ಮಾಡಿದ್ದಾರೆ.
ಆಂಧ್ರಪ್ರದೇಶದಲ್ಲಿ 25 ಲೋಕಸಭೆ ಹಾಗೂ 175 ವಿಧಾನಸಭೆ ಕ್ಷೇತ್ರಗಳಿಗೆ ಇಂದು ಏಕಕಾಲಕ್ಕೆ ಮತದಾನ ನಡೆಯುತ್ತಿದೆ. ಈ ವೇಳೆ ಅನಂತಪುರ ಜಿಲ್ಲೆಯ ಗುಂತಕಲ್ ವಿಧಾನಸಭೆ ಕ್ಷೇತ್ರದ ಗುತ್ತಿ ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಲು ಬಂದ ಮಧುಸೂಧನ್ ಗುಪ್ತಾ ಈ ಕೃತ್ಯ ಮಾಡಿದ್ದಾರೆ.
ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಹೆಸರುಗಳು ಇವಿಎಂನಲ್ಲಿ ಸರಿಯಾಗಿ ಕಾಣಿಸುತ್ತಿಲ್ಲ ಎಂದು ಆಕ್ರೋಶಗೊಂಡ ಮಧುಸೂದನ್ ಗುಪ್ತಾ ವಿದ್ಯುನ್ಮಾನ ಮತಯಂತ್ರವನ್ನು ನೆಲದ ಮೇಲೆ ಎಸೆದರು. ಈ ಸಂಬಂಧ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com