ಆಪ್ ಜತೆ ಮೈತ್ರಿ ಮಾತುಕತೆ ವಿಫಲ: ದೆಹಲಿಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ)ದ ಜತೆಗಿನ ಮೈತ್ರಿ ಮಾತುಕತೆ ವಿಫಲವಾಗಿದ್ದು, ರಾಷ್ಟ್ರ ರಾಜಧಾನಿಯ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ)ದ ಜತೆಗಿನ ಮೈತ್ರಿ ಮಾತುಕತೆ ವಿಫಲವಾಗಿದ್ದು, ರಾಷ್ಟ್ರ ರಾಜಧಾನಿಯ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ದೆಹಲಿ ಕಾಂಗ್ರೆಸ್ ಉಸ್ತುವಾರಿ ಪಿಸಿ ಚಾಕೋ ಅವರು ಶುಕ್ರವಾರ ಹೇಳಿದ್ದಾರೆ.
ಆದಾಗ್ಯೂ, ನಮ್ಮ ಪಕ್ಷ ಆಪ್ ಜತೆ ಮೈತ್ರಿಗೆ ಈಗಲೂ ಮುಕ್ತವಾಗಿದೆ ಎಂದು ಚಾಕೋ ಅವರು ತಿಳಿಸಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಪ್ರತಿಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಪರಸ್ಪರ ವೈರತ್ವ ಮರೆತು ಲೋಕಸಭೆ ಚುನಾವಣೆಯಲ್ಲಿ ಒಂದಾಗುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿಕೊಂಡೇ ಅಧಿಕಾರಕ್ಕೆ ಬಂದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಈಗ ಅದೇ ಕಾಂಗ್ರೆಸ್ ಕೈ ಹಿಡಿಯಲು ಮುಂದಾಗಿತ್ತು. ಆದರೆ ಮೈತ್ರಿ ಮಾತುಕತೆ ಮತ್ತೆ ಮುರಿದುಬಿದ್ದಿದೆ.
ದೆಹಲಿಯ 7 ಲೋಕಸಭಾ ಕ್ಷೇತ್ರಗಳ ಪೈಕಿ ಮೂರನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ಸಿದ್ಧವಿರುವುದಾಗಿ ಕೇಜ್ರಿವಾಲ್ ಅವರು ಈಗಾಗಲೇ ಘೋಷಿಸಿದ್ಧಾರೆ. ಆದರೆ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಿಗೆ ಪಟ್ಟು ಹಿಡಿದಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com