ಖಾಕಿ ಅಂಡರ್ ವೇರ್ ಹೇಳಿಕೆ: ಎಸ್ ಪಿ ಮುಖಂಡ ಅಜಂಖಾನ್ ಗೆ ಮತ್ತೊಂದು ಸಂಕಷ್ಟ, ಎಫ್ ಐಆರ್ ದಾಖಲು

ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಜಯಪ್ರದಾ ವಿರುದ್ಧ 'ಖಾಕಿ ಅಂಡರ್ ವೇರ್' ಪದ ಬಳಕೆ ಮಾಡಿ ವಿವಾದಕ್ಕೆ ಕಾರಣವಾಗಿರುವ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಇದೀಗ ಎಫ್ ಐಆರ್ ದಾಖಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಲಖನೌ: ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಜಯಪ್ರದಾ ವಿರುದ್ಧ 'ಖಾಕಿ ಅಂಡರ್ ವೇರ್' ಪದ ಬಳಕೆ ಮಾಡಿ ವಿವಾದಕ್ಕೆ ಕಾರಣವಾಗಿರುವ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಇದೀಗ ಎಫ್ ಐಆರ್ ದಾಖಲಾಗಿದೆ.
ಮೂಲಗಳ ಪ್ರಕಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಜಂಖಾನ್ ಅವರ ಭಾಷಣದ ವಿಡಿಯೋ ಆಧರಿಸಿ ರಾಂಪುರ ಪೊಲೀಸರು ಅಜಂಖಾನ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಇಂದು ಬೆಳಗ್ಗೆಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷ ರೇಖಾ ಶರ್ಮಾ ಅವರೂ ಕೂಡ ಅಜಂಖಾನ್ ಹೇಳಿಕೆ ವಿರುದ್ಧ ಕಿಡಿಕಾರಿ ಇದು ನಾಚಿಕೆಗೇಡಿನ ಹೇಳಿಕೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಸಂಬಂಧ ಪೊಲೀಸ್ ಇಲಾಖೆಯೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದರು.
ಇದಾದ ಕೆಲವೇ ಗಂಟೆಗಳ ಅವಧಿಯಲ್ಲಿ ಅಜಂಖಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇನ್ನು ನಿನ್ನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದ ಸಮಾಜವನಾದಿ ಪಕ್ಷದ ಚುನಾವಣಾ ರ್ಯಾಲಿಯಲ್ಲಿ ಮಾಜಿ ಸಿಎಂ ಅಖಿಲೇಶ್ ಯಾದವ್ ಕೂಡ ಉಪಸ್ಥಿತರಿದ್ದರು. ಇದೇ ಕಾರ್ಯಕ್ರಮದ ವೇದಿಕೆಯಲ್ಲೇ ಅಜಂಖಾನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. 'ಜಯಪ್ರದಾ ಅವರನ್ನು ರಾಜಕೀಯಕ್ಕೆ ಕರೆತಂದಿದ್ದೇ ನಾನು. ಇದೇ ರಾಂಪುರದಿಂದ ಆಕೆಗೆ ಟಿಕೆಟ್ ಕೊಡಿಸಿದ್ದೆ. ಆಕೆಯ ಬಾಡಿಗಾರ್ಡ್ ನಂತೆ ಆಕೆಯನ್ನು ಯಾರೂ ಕೂಡ ಸ್ಪರ್ಶಿಸದಂತೆ ನೋಡಿಕೊಂಡೆ. ಆದರೆ ಆಕೆಯ ನಿಜವಾದ ಮುಖವನ್ನು ತಿಳಿಯಲು ನನಗೆ 17 ವರ್ಷಗಳೇ ಬೇಕಾಯಿತು. 17 ದಿನಗಳ ಹಿಂದಷ್ಟೇ ಆಕೆ ಖಾಕಿ ಅಂಡರ್ ವೇರ್ ಧರಿಸುತ್ತಾರೆ ಎಂದು ತಿಳಿಯಿತು ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com