ಭಾರತಕ್ಕೆ ಇಬ್ಬರು ಪ್ರಧಾನಿಗಳು ಬೇಕೆಂಬುದನ್ನು ಒಪ್ಪುವುದಿಲ್ಲ, ಕಾಶ್ಮೀರವನ್ನು ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಬಿಜೆಪಿ ಅಸ್ಥಿತ್ವದಲ್ಲಿರುವವರೆಗೂ ಕಾಶ್ಮೀರ ಭಾರತದಲ್ಲೇ ಇರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ....
ಅಮಿತ್ ಶಾ
ಅಮಿತ್ ಶಾ
ಸಾಂಘ್ಲಿ: ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಬಿಜೆಪಿ ಅಸ್ಥಿತ್ವದಲ್ಲಿರುವವರೆಗೂ ಕಾಶ್ಮೀರ ಭಾರತದಲ್ಲೇ ಇರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದ ಅಮಿತ್ ಶಾ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ, ಇತ್ತೀಚೆಗೆ  ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಮಂತ್ರಿಬೇಕೆಂದು ಹೇಳಿದ್ದರು. ಕಾಂಗ್ರೆಸ್ ಪಕ್ಷ ಕೂಡ ದೇಶ ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಶ್ಮೀರವನ್ನು ನಮ್ಮಿಂದ ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ, ಬಿಜೆಪಿ ಇರುವವರೆಗೂ ಕಾಶ್ಮೀರ ದೂರ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ಭಾರತಕ್ಕೆ ಇಬ್ಬರು ಪ್ರಧಾನಮಂತ್ರಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ,  ಭಾರತದ ರಕ್ಷಣೆ ನಮ್ಮೆಲ್ಲರ ಹೊಣೆ, ದೇಶದ ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಅಮಿತ್ ಶಾ ವಿವರಿಸಿದರು 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com