ಬಿಜೆಪಿ ಸೇರಿದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಭೋಪಾಲ್ ನಿಂದ ಸ್ಪರ್ಧೆ ಸಾಧ್ಯತೆ

ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ತಾವು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಶೀಘ್ರ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಭೋಪಾಲ್: ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ತಾವು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಶೀಘ್ರ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ಇಂದು ಭೋಪಾಲ್ ನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಪಕ್ಷದ ಹಿರಿಯ ಮುಖಂಡ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷ ಸೇರ್ಪಡೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಾವು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಭೋಪಾಲ್ ಕ್ಷೇತ್ರದಿಂದ ಟಿಕೆಟ್ ಪಡೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಇನ್ನು ಇದೇ ಭೋಪಾಲ್ ನಿಂದ ಕಾಂಗ್ರೆಸ್ ಪಕ್ಷದಿಂದ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸ್ಪರ್ಧಿಸುತ್ತಿದ್ದು, ಸಾಧ್ವಿ ಪ್ರಗ್ಯಾಸಿಂಗ್ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಜಯ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಎರಡ ಪ್ರಮುಖ ಪ್ರಕರಣಗಳಲ್ಲಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಜೈಲು ಪಾಲಾಗಿದ್ದರು. ಬಲುಪಂಥೀಯ ನಾಯಕ ಸುನಿಲ್ ಜೋಷಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿ ಜೈಲು ಪಾಲಾಗಿದ್ದ ಅವರು 2017ರಲ್ಲಿ ಖುಲಾಸೆಯಾಗಿದ್ದರು. ಅಂತೆಯೇ 2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜೈಲು ಪಾಲಾಗಿದ್ದ ಸಾಧ್ವಿ ಪ್ರಗ್ಯಾ ಸಿಂಗ್ ಗೆ 2016ರಲ್ಲಿ ಎನ್ ಐಎ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಇದಲ್ಲದೆ ಮಹಾರಾಷ್ಟ್ರ ಸರ್ಕಾರ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿರುದ್ಧ ಹೇರಿದ್ದ ಯೋಜಿತ ಅಪರಾಧದ ಅಡಿಯಲ್ಲಿ ಹಾಕಲಾಗಿದ್ದ ಪ್ರಕರಣವನ್ನೂ ಹಿಂಪಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com