ಸಾಧ್ವಿ ಪ್ರಗ್ಯಾ ಚುನಾವಣೆಗೆ ನಿಲ್ಲದಂತೆ ನಿಷೇಧಿಸಬೇಕು:ಮಾಲೆಗಾಂವ್ ಸ್ಫೋಟದ ಸಂತ್ರಸ್ಥನ ತಂದೆಯಿಂದ ಕೋರ್ಟ್ ಮೊರೆ

ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಲೋಕಸಭಾ ಚುನಾವಣೆಗೆ ನಿಲ್ಲದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಎನ್ ಐಎ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಸಾಧ್ವಿ ಪ್ರಗ್ಯಾ ಠಾಕೂರ್
ಸಾಧ್ವಿ ಪ್ರಗ್ಯಾ ಠಾಕೂರ್

ಮುಂಬೈ: ಮಾಲೆಗಾಂವ್ ಬಾಂಬ್  ಸ್ಪೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಲೋಕಸಭಾ ಚುನಾವಣೆಗೆ ನಿಲ್ಲದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಎನ್ ಐಎ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮಧ್ಯಪ್ರದೇಶದ ಭೂಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಅನಾರೋಗ್ಯ ಸರಿಯಿಲ್ಲ ಎಂದು ಆಕೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಚುನಾವಣೆಗೆ ಸ್ಪರ್ಧಿಸುವುದರಿಂದ ಆರೋಗ್ಯ ಸರಿಯಾಗುತ್ತದೆಯೇ ? ಎಂದು  ಅರ್ಜಿದಾರರಾದ ಸಯ್ಯದ್ ಬಿಲಾಲ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಸಾಧ್ವಿ ಪ್ರಗ್ಯಾ ಠಾಕೂರ್ ಅವರನ್ನು ಅಭ್ಯರ್ಥಿಯಾಗಿರುವುದನ್ನು ಪ್ರಶ್ನಿಸಿದ್ದಾರೆ.ಈ ಪ್ರಕರಣ ಸಂಬಂಧ  ಏಪ್ರಿಲ್ 23 ರಂದು ಎನ್ ಐಎ ನ್ಯಾಯಾಲಯ ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ.
2008 ರ ಮಾಲೇಗಾಂವ್ ಸ್ಫೋಟದ ಆರೋಪಿಯಾಗಿ ಬಂಧನಕ್ಕೊಳಗಾಗಿದ್ದ ಸಾಧ್ವಿ ಅವರನ್ನು ಇತ್ತೀಚೆಗಷ್ಟೇ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ ಆರೋಪ ಮುಕ್ತಗೊಳಿಸಿತ್ತು.
ಬುಧವಾರ ಬೆಳಗ್ಗೆಯಷ್ಟೇ ಅಧಿಕೃತವಾಗಿ ಬಿಜೆಪಿ ಸೇರಿದ  ಸಾಧ್ವಿ ಪ್ರಗ್ಯಾ ಸಿಂಗ್ ಅವರು, ದಿಗ್ವಿಜಯ್ ಸಿಂಗ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಎದುರಿಸಲಿದ್ದಾರೆ.
ಮಧ್ಯಪ್ರದೇಶದಲ್ಲಿ ಒಟ್ಟು ಏಪ್ರಿಲ್ 29 ರಿಂದ ಮೇ 19 ರವರೆಗೆ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೂರಬೀಳಲಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com