ರಾಹುಲ್ ಪ್ರಧಾನಿಯಾದರೆ ಶಬರಿಮಲೆಗೆ ಮತ್ತೆ ಮಹಿಳೆಯರ ಪ್ರವೇಶ ನಿಷೇಧ: ಚೆನ್ನಿತಾಲ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾದರೆ ಶಬರಿಮಲೆಗೆ ಮತ್ತೆ ಮಹಿಳೆಯರ ಪ್ರವೇಶವನ್ನು ನಿಷೇಧಿಸಲು ಕಾನೂನಿಗೆ ತಿದ್ದುಪಡಿ ತರಲಾಗುವುದು...
ರಮೇಶ್ ಚೆನ್ನಿತಾಲ
ರಮೇಶ್ ಚೆನ್ನಿತಾಲ
ತಿರುವನಂತಪುರಂ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾದರೆ ಶಬರಿಮಲೆಗೆ ಮತ್ತೆ ಮಹಿಳೆಯರ ಪ್ರವೇಶವನ್ನು ನಿಷೇಧಿಸಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಕೇರಳ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತಾಲ ಅವರು ಶುಕ್ರವಾರ ಹೇಳಿದ್ದಾರೆ.
ಬಿಜೆಪಿ ಮತ್ತು ಸಿಪಿಎಂ ಶಬರಿಮಲೆ ವಿವಾದದಲ್ಲಿ ಕೀಳುಮಟ್ಟದ ರಾಜಕೀಯ ಮಾಡುತ್ತಿವೆ. ಆದರೆ ಈ ಬಾರಿ ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಸಂಪ್ರದಾಯ ರಕ್ಷಿಸಲು ಸಂಸತ್ತಿನಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಕೇರಳ ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರುು ಮೋಸಳೆ ಕಣ್ಣಿರು ಹಾಕುತ್ತಿದ್ದಾರೆ. ಶಬರಿಮಲೆ ದೇವಸ್ಥಾನದ ಸಂಪ್ರದಾಯ ರಕ್ಷಿಸಲು ಶಾಸನ ತರಲು ಬಿಜೆಪಿ ಎಲ್ಲಾ ರೀತಿಯ ಅವಕಾಶ ಇತ್ತು. ಆದರೆ ಅದನ್ನು ಮಾಡಲಿಲ್ಲ ಎಂದು ಚೆನ್ನಿತಾಲ ವಾಗ್ದಾಳಿ ನಡೆಸಿದರು.
ಶಬರಿಮಲೆ ವಿವಾದವನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಕೇರಳ ಪ್ರತಿಪಕ್ಷ ನಾಯಕ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com