ವಿವಾದಿತ ಹೇಳಿಕೆ: ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಗೆ ಚುನಾವಣಾ ಆಯೋಗ ನೋಟಿಸ್

ಹೇಮಂತ್ ಕರ್ಕರೆ ಸಾವು ಮತ್ತು ಬಾಬ್ರಿ ಮಸೀದಿ ಧ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಭೋಪಾಲ್: ಹೇಮಂತ್ ಕರ್ಕರೆ ಸಾವು ಮತ್ತು ಬಾಬ್ರಿ ಮಸೀದಿ ಧ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ತಮ್ಮ ಜೈಲು ವಾಸದ ಕುರಿತು ಭಾವನಾತ್ಮಕವಾಗಿ ಮಾತನಾಡಿದ್ದ ಪ್ರಗ್ಯಾ ಸಿಂಗ್ ಠಾಕೂರ್ ಹೇಮಂತ್ ಕರ್ಕರೆ ಸಾವಿಗೆ ನನ್ನ ಶಾಪವೇ ಕಾರಣ ಎಂದು ಹೇಳಿದ್ದರು. ಈ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗ ಪ್ರಗ್ಯಾ ಸಿಂಗ್ ಠಾಕೂರ್ ಗೆ ನೋಟಿಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಇಂದು 'ನಾವು ಖಂಡಿತಾ ರಾಮಮಂದಿರ ಕಟ್ಟುತ್ತೇವೆ. ಭವ್ಯವಾದ ಮಂದಿರ ನಿರ್ಮಿಸುತ್ತೇವೆ. ರಾಮಮಂದಿರ ನಿರ್ಮಾಣಕ್ಕೆ ಕಾಲಮಿತಿ ಇದೆಯೇ ಎಂದು ಪ್ರಶ್ನಿಸಿದಾಗ, ನಾವು ಮಂದಿರ ನಿರ್ಮಿಸುತ್ತೇವೆ. ಈಗಾಗಲೇ ನಾವು ಮಸೀದಿ ಕೆಡವಿದ್ದೇವೆ ಎಂದು ಹೇಳಿ ಮತ್ತೆ ವಿವಾದಕ್ಕೆ ಕಾರಣವಾಗಿದ್ದಾರೆ.
ಈ ಹೇಳಿಕೆಗೆ ಸಂಬಂಧಿಸಿದಂತೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ಮತ್ತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಲು ಮುಂದಾಗಿದೆ. ಆ ಮೂಲಕ ಒಂದೇ ದಿನ ಎರಡನೇ ನೋಟಿಸ್ ಜಾರಿ ಮಾಡಿದೆ. ಮಧ್ಯಪ್ರದೇಶ ಮುಖ್ಯ ಚುನಾವಣಾ ಅಧಿಕಾರಿ ವಿ.ಎಲ್. ಕಾಂತಾ ರಾವ್ ಎಲ್ಲ ರಾಜಕೀಯ ಪಕ್ಷಗಳಿಗೆ ಸ್ಪಷ್ಟ ನಿರ್ದೇಶನ ಹೊರಡಿಸಿ ಪದೇ ಪದೇ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವುದು ಮತ್ತು ನಿಂದನಾತ್ಮಕ, ಪ್ರಚೋದನಾಕಾರಿ ಹೇಳಿಕೆ ನೀಡಿದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com