'ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಕಣ್ಣೀರು ಹಾಕಿದ್ದರು': ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು ಎಂದು
ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಕಣ್ಣೀರು ಹಾಕಿದ್ದರು!
ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಕಣ್ಣೀರು ಹಾಕಿದ್ದರು!
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು ಎಂದು ಆರೋಪಿಸಿದ್ದಾರೆ. 
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಉಗ್ರರಿಗಾಗಿ ಕಣ್ಣೀರು ಹಾಕಿದ್ದರು. ಆದರೆ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳಿಗೆ ಕಣ್ಣೀರು ಹಾಕಲಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. 
2008 ರ ಸೆ.19 ರಂದು ಬಾಟ್ಲಾ ಹೌಸ್ ಎನ್ ಕೌಂಟರ್ ಘಟನೆ ನಡೆದಿತ್ತು. ದೆಹಲಿಯ ಜಮೀಯಾ ನಗರ್ ನ ಪ್ರದೇಶದ್ಲಲಿ ಬರುವ  ಬಾಟ್ಲಾ ಹೌಸ್ ನಲ್ಲಿ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರರ ವಿರುದ್ಧ ಎನ್ ಕೌಂಟರ್ ಕಾರ್ಯಾಚರಣೆ ನಡೆಸಲಾಗಿತ್ತು. ಇಬ್ಬರು ಶಂಕಿತ ಉಗ್ರರನ್ನು ಹತ್ಯೆ ಮಾಡಲಾಗಿತ್ತು, ಮತ್ತಿಬ್ಬರು ಉಗ್ರರನ್ನು ಬಂಧಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com