ಪ್ರಿಯಾಂಕಾ ಗಾಂಧಿಗೆ ಹಿನ್ನಡೆ, ಮೋದಿ ವಿರುದ್ಧ ವಾರಣಾಸಿಯಲ್ಲಿ ಎಸ್ ಪಿ-ಬಿಎಸ್ ಪಿ ಮೈತ್ರಿ ಅಭ್ಯರ್ಥಿ ಘೋಷಣೆ

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆ ಮಾಡುವ ಕುರಿತು ಇಂಗಿತ ವ್ಯಕ್ತಪಡಿಸಿದ್ದ ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಆಸೆಗೆ ಎಸ್ ಪಿ-ಬಿಎಸ್ ಪಿ ಮೈತ್ರಿ ತಣ್ಣೀರೆರಚಿದ್ದು, ವಾರಣಾಸಿ ಕ್ಷೇತ್ರಕ್ಕೆ ತಮ್ಮ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ವಾರಣಾಸಿ: ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆ ಮಾಡುವ ಕುರಿತು ಇಂಗಿತ ವ್ಯಕ್ತಪಡಿಸಿದ್ದ ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಆಸೆಗೆ ಎಸ್ ಪಿ-ಬಿಎಸ್ ಪಿ ಮೈತ್ರಿ ತಣ್ಣೀರೆರಚಿದ್ದು, ವಾರಣಾಸಿ ಕ್ಷೇತ್ರಕ್ಕೆ ತಮ್ಮ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.
ಹೌದು.. ಸೋಮವಾರ ಬಿಎಸ್ ಪಿ ಮತ್ತು ಎಸ್ ಪಿ ಮೈತ್ರಿ ಪಕ್ಷಗಳು ತಮ್ಮ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು. ಈ ಪಟ್ಟಿಯಲ್ಲಿ ತಮ್ಮ ವಾರಣಾಸಿ ಕ್ಷೇತ್ರದಿಂದಲೂ ಸ್ಪರ್ಧಿಯನ್ನು ಕಣಕ್ಕಿಳಿಸಿವೆ. ಈ ಹಿಂದೆ ಇದೇ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಇದೇ ಕಾರಣಕ್ಕೆ ಬಿಎಸ್ ಪಿ ಮತ್ತು ಎಸ್ ಪಿ ಪಕ್ಷಗಳು ವಾರಣಾಸಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಸಾಧ್ಯತೆಗಳ ಕುರಿತು ಲೆಕ್ಕಾಚಾರಾ ಹಾಕಲಾಗಿತ್ತು. 
ಆದರೆ ಇದೀಗ ಈ ಲೆಕ್ಕಾಚಾರಗಳನ್ನೆಲ್ಲಾ ಮೈತ್ರಿ ಪಕ್ಷಗಳು ಉಲ್ಟಾ ಮಾಡಿದ್ದು, ವಾರಣಾಸಿಯಲ್ಲಿ ತಮ್ಮದೇ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಸ್ಥಳೀಯ ಕಾಂಗ್ರೆಸ್ ಶಾಸಕರ ಪುತ್ರಿ ಶಾಲಿನಿ ಯಾದವ್ ರನ್ನು ಬಿಎಸ್ ಪಿ ಮತ್ತು ಎಸ್ ಪಿ ಪಕ್ಷಗಳು ವಾರಣಾಸಿಯಿಂದ ಕಣಕ್ಕಿಳಿಸಿವೆ. ಮೈತ್ರಿ ಪಕ್ಷಗಳ ಈ ನಡೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಈ ಹಿಂದೆ ಅಂದರೆ 2014ರಲ್ಲಿ ಕಾಂಗ್ರೆಸ್ ಪಕ್ಷ ಇದೇ ವಾರಣಾಸಿಯಿಂದ ಕಾಂಗ್ರೆಸ್ ಪಕ್ಷ ಅಜಯ್ ರಾಯ್ ರನ್ನು ಕಣಕ್ಕಿಳಿಸಿತ್ತು. ಆದರೆ ಅಜಯ್ ರಾಯ್ ಮೋದಿ ವಿರುದ್ಧ ಬರೊಬ್ಬರಿ 5.8ಲಕ್ಷ ಮತಗಳ ಅಂತರದಲ್ಲಿ ಸೋತಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com