ವಿವಾದಾತ್ಮಕ ಹೇಳಿಕೆ: ಸಾಧ್ವಿ ಪ್ರಗ್ಯಾ ಸಿಂಗ್ ಗೆ ಬಿಗ್ ರಿಲೀಫ್, ಚುನಾವಣಾ ಸ್ಪರ್ಧೆ ತಡೆ ಅಸಾಧ್ಯ ಎಂದ ಕೋರ್ಟ್!

ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಚುನಾವಣಾ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ ಐಎ ವಿಶೇಷ ಕೋರ್ಟ್ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಭೋಪಾಲ್: ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಚುನಾವಣಾ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ ಐಎ ವಿಶೇಷ ಕೋರ್ಟ್ ಹೇಳಿದೆ. 
2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿದ್ದ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಚುನಾವಣಾ ಸ್ಪರ್ಧೆಯನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂದು ಎನ್ ಐಎ ಕೋರ್ಟ್ ಹೇಳಿದೆ. ಈ ಹಿಂದೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಮುಂಬೈ ದಾಳಿಯಲ್ಲಿ ಹುತಾತ್ಮರಾಗಿದ್ದ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಹಾಗೂ ಬಾಬ್ರಿ ಮಸೀದಿ ಧ್ವಂಸ ಕುರಿತು ಹೇಳಿಕೆ ನೀಡಿದ್ದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೆ ಅವರ ಚುನಾವಣಾ ಸ್ಪರ್ಧೆಯನ್ನು ತಡೆಯುವಂತೆ ಆಗ್ರಹಿಸಲಾಗಿತ್ತು. 
ಅಲ್ಲದೆ ಪ್ರಕರಣ ಸಂಬಂಧ ಸಾಧ್ವಿ ಪ್ರಗ್ಯಾ ಸಿಂಗ್ ವಿಚಾರಣೆಗೆ ಖುದ್ಧು ಹಾಜರಾಗುವಂತೆಯೇ ಕೋರಲಾಗಿತ್ತು. ಇದಕ್ಕೆ ಪ್ರತಿವಾದ ಮಂಡಿಸಿದ ಸಾಧ್ವಿ ಪರ ವಕೀಲರು ಇದೊಂದು ರಾಜಕೀಯ ಷಡ್ಯಂತ್ರವಾಗಿದ್ದು, ಕೇವಲ ಪಬ್ಲಿಸಿಟಿ ಗಿಮಿಕ್ ಎಂದು ಹೇಳಿದ್ದಾರೆ. ಅಲ್ಲದೆ ಇಂತಹ ಪ್ರಕರಣಗಳನ್ನು ಸ್ವೀಕರಿಸಬಾರದು ಎಂದು ವಾದ ಮಂಡಿಸಿದ್ದರು.
ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಎನ್ ಐಎ ವಿಶೇಷ ನ್ಯಾಯಾಲಯ, ಹಾಲಿ ಚುನಾವಣೆಯಲ್ಲಿ ಅಭ್ಯರ್ಥಿಗಳ ಸ್ಪರ್ಧೆಯನ್ನು ತಡೆ ಹಿಡಿಯುವ ಅಧಿಕಾರಿ ಕೋರ್ಟ್ ಗೆ ಇಲ್ಲ. ಅದೇನಿದ್ದರೂ ಚುನಾವಣಾ ಆಯೋಗದ ವ್ಯಾಪ್ಕಿಗೆ ಒಳಪಟ್ಟದ್ದಾಗಿದೆ. ಆರೋಪಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯ ಅಧಿಕಾರ ಕೋರ್ಟ್ ಗಿಲ್ಲ ಎಂದು ವಿಶೇಷ ನ್ಯಾಯಮೂರ್ತಿ ಪಡಾಲ್ಕರ್ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಸಾಧ್ವಿ ಪ್ರಗ್ಯಾ ಸಿಂಗ್ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com