ಉತ್ತರ ಪ್ರದೇಶ: ಅಜಂಖಾನ್ 2 ದಿನ ಪ್ರಚಾರ ಮಾಡದಂತೆ ಚುನಾವಣಾ ಆಯೋಗದಿಂದ ನಿರ್ಬಂಧ

ಉತ್ತರ ಪ್ರದೇಶದಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರಚೋದನಕಾರಿ ಹೇಳಿಕ ನೀಡಿದ್ದ ಆರೋಪದ ಮೇರೆಗೆ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಎರಡು ದಿನಗಳ ಕಾಲ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧಿಸಿದೆ.
ಅಜಂಖಾನ್
ಅಜಂಖಾನ್

ಲಖನೌ:  ಉತ್ತರ ಪ್ರದೇಶದಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರಚೋದನಕಾರಿ ಹೇಳಿಕ ನೀಡಿದ್ದ ಆರೋಪದ ಮೇರೆಗೆ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಎರಡು ದಿನಗಳ ಕಾಲ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧಿಸಿದೆ.

ಈ ತಿಂಗಳಲ್ಲಿ ಎರಡನೇ ಬಾರಿ ಚುನಾವಣಾ ಆಯೋಗದಿಂದ ಅಜಂಖಾನ್ ನಿಷೇಧಕ್ಕೊಳಗಾಗಿದ್ದಾರೆ. ಬುಧವಾರ ಬೆಳಗ್ಗೆ 6 ಗಂಟೆಯಿಂದ ಈ ಹೊಸ ನಿರ್ಬಂಧ ಜಾರಿಗೆ ಬರಲಿದೆ.

ಈ ಹಿಂದೆ ಬಿಜೆಪಿ ಅಭ್ಯರ್ಥಿ ಜಯಪ್ರಧಾ ಖಾಕಿ ಬಣ್ಣದ ಒಳ ಉಡುಪು ಧರಿಸುತ್ತಾರೆ  ಎಂದು ಹೇಳಿಕೆ ನೀಡಿ ಚುನಾವಣಾ ಆಯೋಗದಿಂದ ಮೂರು ದಿನಗಳ ಕಾಲ ಅಜಂಖಾನ್ ನಿಷೇಧಕ್ಕೊಳಗಾಗಿದ್ದರು.
ಅಜಂಖಾನ್ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು.ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಮ್ಮುಖದಲ್ಲಿಯೇ  ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ಅಜಂಖಾನ್ ಮೂರು ದಿನಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com