ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 9ನೇ ಪಟ್ಟಿ: ತಮಿಳುನಾಡಿನ ಶಿವಗಂಗಾದಿಂದ ಕಾರ್ತಿ ಚಿದಂಬರಂ ಕಣಕ್ಕೆ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಒಂಬತ್ತನೇ ಪಟ್ಟಿ ಬಿಡುಗಡೆಯಾಗಿದೆ.ಈ ಪಟ್ಟಿಯಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ, ಐಎನ್ಎಕ್ಸ್ ಮೀಡಿಯಾ ಅವ್ಯವಹಾ...
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ
ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಒಂಬತ್ತನೇ ಪಟ್ಟಿ ಬಿಡುಗಡೆಯಾಗಿದೆ.ಈ ಪಟ್ಟಿಯಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ, ಐಎನ್ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಆಪಾದಿತರಾಗಿರುವ ಕಾರ್ತಿ ಚಿದಂಬರಂ ಹೆಸರು ಅಚ್ಚರಿಯ ಸೇರ್ಪಡೆಯಾಗಿದೆ.
ಕಾರ್ತಿ ಚಿದಂಬರಂ ತಮಿಳುನಾಡಿನ ಶಿವಗಂಗಾದಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ.
ಕಾರ್ತಿ ಚಿದಂಬರಂ ಅವರು ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಸೇರಿ ಅನೇಕ  ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ
ಇನ್ನು ಕಾಂಗ್ರೆಸ್ ಪಟ್ಟಿಯಲ್ಲಿ ಮಹಾರಾಷ್ಟ್ರ, ಬಿಹಾರದ ಮೂವರು ಅಭ್ಯರ್ಥಿಗಳು, ತಮಿಳುನಾಡು, ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರದ ಒಬ್ಬೊಬ್ಬ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
ಮಾಜಿ ಎಮ್ ಸಿಪಿ ನಾಯಕ ತಾರಿಕ್ ಅನ್ವರ್ ಅವರು ಬಿಹಾರದ ಕತಿಹಾರ್ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾದರೆ ಮಾಜಿ ಪ್ರಧಾನ ಕಾರ್ಯದರ್ಶಿ ಬಿ. ಕೆ. ಹರಿಪ್ರಸಾದ್ ಕರ್ನಾಟಕದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com