ಉದ್ದೇಶಪೂರ್ವಕವಾಗಿ ಅಡ್ವಾಣಿ ಅವರನ್ನು ತೆಗೆದುಹಾಕಲಾಗಿದೆ: ಮತ್ತೆ ಗುಡುಗಿದ ಶತೃಘ್ನ ಸಿನ್ಹಾ

ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಉದ್ದೇಶಪೂರ್ವಕವಾಗಿಯೇ ಅಭ್ಯರ್ಥಿಗಳ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು, ನಿಜಕ್ಕೂ ಇದು ಅತ್ಯಂತ ಕಳವಳಕಾರಿ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಉದ್ದೇಶಪೂರ್ವಕವಾಗಿಯೇ ಅಭ್ಯರ್ಥಿಗಳ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು, ನಿಜಕ್ಕೂ ಇದು ಅತ್ಯಂತ ಕಳವಳಕಾರಿ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ಹೇಳಿದ್ದಾರೆ.
ನಿನ್ನೆಯಷ್ಟೇ ಬಿಜೆಪಿಯ ಎರಡನೇ ಅಭ್ಯರ್ಥಿಗಳ  ಪಟ್ಟಿ ಬಿಡುಗಡೆಯಾಗಿದ್ದು, ಪಟ್ಟಿಯಲ್ಲಿ ಎಲ್ ಕೆ ಅಡ್ವಾಣಿ ಅವರ ಗಾಂಧಿನಗರ ಕ್ಷೇತ್ರದಿಂದ ಅಮಿತ್ ಶಾ ಅವರಿಗೆ ಟಿಕೆಟ್ ನೀಡಲಾಗಿದೆ. ಅಂತೆಯೇ ಸಿನ್ಹಾ ಪ್ರತಿನಿಧಿಸುತ್ತಿದ್ದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಮೊದಲೇ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದ ಶತೃಘ್ನ ಸಿನ್ಹಾ ಇದೀಗ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಬಿಜೆಪಿ ವಿರುದ್ಧ ಅಕ್ಷರಶಃ ಬಂಡಾಯನಾಯಕರಾಗಿ ಮಾರ್ಪಟ್ಟಿದ್ದು, ನೇರವಾಗಿಯೇ ಮೋದಿ ಮತ್ತು ಅಮಿತ್ ಶಾ ನಾಯಕತ್ವವನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿನ್ಹಾ, ಯಾವುದೇ ಕಾರಣಕ್ಕೂ ಅಮಿತ್ ಶಾ ಅಡ್ವಾಣಿ ಅವರಿಗೆ ಸರಿಸಮಾನರಾಗಲು ಸಾಧ್ಯವೇ ಇಲ್ಲ. ಅಡ್ವಾಣಿ ಅವರನ್ನು ಉದ್ದೇಶ ಪೂರ್ವಕವಾಗಿ ತೆಗೆದು ಹಾಕಲಾಗಿದ್ದು, ಬಿಜೆಪಿಯಲ್ಲಿನ ಈ ಬೆಳವಣಿಗೆ ನಿಜಕ್ಕೂ ಆತಂಕಕಾರಿ, ನೋವಿನ ಸಂಗತಿ  ಮತ್ತು ಬಿಜೆಪಿಯ ನಾಚಿಕೆ ಇಲ್ಲದ ನಡೆಯಾಗಿದೆ ಎಂದು ಹೇಳಿದ್ದಾರೆ.
'ಅಡ್ವಾಣಿ ಬಿಜೆಪಿ ಸಂಸ್ಥಾಪಕ ಮುಖಂಡರು. ಬಿಜೆಪಿ ಅತ್ಯಂತ ಗೌರವಾನ್ವಿತ ನಾಯಕ. ಸ್ನೇಹಿತ, ತತ್ವಜ್ಞಾನಿ, ಮಾರ್ಗದರ್ಶಿ, ತಂದೆ ವ್ಯಕ್ತಿ ಮತ್ತು ಪಕ್ಷದ ಪರಮೋಚ್ಛ ನಾಯಕ. ಇಂತಹವರ ರಾಜಕೀಯದ ಕೊನೆಯ ದಿನಗಳಲ್ಲಿ ಈ ರೀತಿಯ ಅಪಮಾನ ಸರಿಯಲ್ಲ. ಅದೂ ಕೂಡ ಪಕ್ಷದ ಅಧ್ಯಕ್ಷ ಹುದ್ದೆಯಲ್ಲಿರುವ ವ್ಯಕ್ತಿಯನ್ನು ಅಡ್ವಾಣಿ ಅವರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿಸುತ್ತಿರುವುದು ಸರಿಯಲ್ಲ.  ದೇಶದ ಜನತೆ ಇವೆಲ್ಲವನ್ನೂ ಗಮನಿಸುತ್ತಿದ್ದಾರೆ. ನೀವು ನನಗೆ ಮಾಡಿದ್ದನ್ನು ನಾನು ಸಹಿಸಿಕೊಳ್ಳಬಲ್ಲ. ಅದಕ್ಕೆ ತಿರುಗೇಟು ಕೂಡ ನೀಡಬಲ್ಲ ಎಂದು ಸಿನ್ಹಾ ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com