ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಚುನಾವಣಾ ಆಯೋಗದಿಂದ ಸಿಧುಗೆ ನೋಟಿಸ್

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಳ್ಳ ಎಂದು ಟೀಕಿಸಿದ್ದ ಕಾಂಗ್ರೆಸ್‌ ಸ್ಟಾರ್ ಪ್ರಚಾರಕ ಹಾಗೂ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ....

Published: 01st May 2019 12:00 PM  |   Last Updated: 01st May 2019 07:24 AM   |  A+A-


Election commission notice to Sidhu for remarks against PM Modi

ನವಜೋತ್ ಸಿಂಗ್ ಸಿಧು

Posted By : LSB LSB
Source : PTI
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಳ್ಳ ಎಂದು ಟೀಕಿಸಿದ್ದ ಕಾಂಗ್ರೆಸ್‌ ಸ್ಟಾರ್ ಪ್ರಚಾರಕ ಹಾಗೂ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಗುಜರಾತ್ ಬಿಜೆಪಿ ಕಾರ್ಯಕರ್ತರು ನೀಡಿದ ದೂರಿನ ವಿಚಾರಣೆ ನಡೆಸಿದ ಆಯೋಗ, ಈ ಕುರಿತು ನಾಳೆ ಸಂಜೆಯೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನವಜೋತ್ ಸಿಂಗ್ ಸಿಧು ಅವರಿಗೆ ಸೂಚಿಸಿದೆ.

ಏಪ್ರಿಲ್ 17ರಂದು ಅಹಮದಾಬಾದ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ್ದ ಸಿಧು, ಮೋದಿ ಅತಿದೊಡ್ಡ ಸುಳ್ಳುಗಾರ. ಮಹಾತ್ಮ ಗಾಂಧಿ ಜನಿಸಿದ ಗುಜರಾತ್‌ನಿಂದಲೇ ದೇಶದ ಅತಿದೊಡ್ಡ ಸುಳ್ಳುಗಾರ ಪ್ರಧಾನಿ ನರೇಂದ್ರ ಮೋದಿಯೂ ಬಂದಿರುವುದು ದುರಂತ ಎಂದಿದ್ದರು.

ಇದಕ್ಕು ಮುನ್ನ ಪ್ರಧಾನಿ ಮೋದಿ ವಿರುದ್ಧ ಮುಸ್ಲಿಮರು ಒಗ್ಗೂಡಬೇಕು ಎಂದು ಕರೆ ನೀಡಿದ್ದ ಕಾಂಗ್ರೆಸ್ ನಾಯಕನಿಗೆ ಚುನಾವಣಾ ಆಯೋಗ 72 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಿತ್ತು.
Stay up to date on all the latest ದೇಶ news with The Kannadaprabha App. Download now
facebook twitter whatsapp