ಫೋನಿ ಚಂಡಮಾರುತ: ಆಂಧ್ರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲ

ಫೋನಿ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿಆಂಧ್ರಪ್ರದೇಶದ ಪೂರ್ವ ಗೋದಾವರಿ, ವಿಶಾಖಪಟ್ಟಣಂ, ವಿಜಯನಗರಂ ಹಾಗೂ ಶ್ರೀಕಾರ್ಕುಳಂನಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ.

ಅಮರಾವತಿ: ಫೋನಿ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿಆಂಧ್ರಪ್ರದೇಶದ  ಪೂರ್ವ ಗೋದಾವರಿ, ವಿಶಾಖಪಟ್ಟಣಂ, ವಿಜಯನಗರಂ ಹಾಗೂ ಶ್ರೀಕಾರ್ಕುಳಂನಲ್ಲಿ  ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ.

ಫೋನಿ ಚಂಡಮಾರುತದಿಂದ ಉಂಟಾಗುವ ಸಮಸ್ಯೆಗಳನ್ನು ನಿವಾರಿಸುವ ಹಾಗೂ ಪರಿಹಾರ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಈ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಗೊಳಿಸುವ ಪ್ರಸ್ತಾವಕ್ಕೆ ಭಾರತೀಯ ಚುನಾವಣಾ ಆಯೋಗ ಅನುಮೋದನೆ ನೀಡಿದೆ.

ಫೋನಿ ಚಂಡಮಾರುತದ ಹಿನ್ನೆಲೆಯಲ್ಲಿ ಈ ನಾಲ್ಕು ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸುವಂತೆ ಕೋರಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.

ಫೋನಿ ಚಂಡಮಾರುತದಿಂದ ಗಂಟೆಗೆ 200 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಪೂರ್ವ ಗೋದಾವರಿ, ವಿಶಾಖಪಟ್ಟಣಂ, ವಿಜಯನಗರಂ ಹಾಗೂ ಶ್ರೀ ಕಾರ್ಕುಳಂನಲ್ಲಿ ಹೈ ಆಲರ್ಟ್ ಘೋಷಿಸಲಾಗಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com