
ನಾಗ್ಪುರ, ನಾದಿಯಾ ಭಾಷಣ: ಚುನಾವಣಾ ಆಯೋಗದಿಂದ ಅಮಿತ್ ಶಾ ಗೆ ಕ್ಲೀನ್ ಚಿಟ್
Source : Online Desk
ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಪಶ್ಚಿಮ ಬಂಗಾಳದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ್ದ ಅಮಿತ್ ಶಾ, ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ಉಗ್ರರ ನೆಲೆ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದಾಗ ಪಾಕಿಸ್ತಾನದಲ್ಲಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಯಲ್ಲಿ ಶೋಕಾಚರಣೆ ನಡೆದಿತ್ತು ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸರ್ಜಿಕಲ್ ಸ್ಟ್ರೈಕ್ ಮಾಡಲು ತಮ್ಮ ಸೇನೆಯನ್ನು ಕಳಿಸಿದ್ದರು ಎಂದು ಅಮಿತ್ ಶಾ ಹೇಳಿದ್ದರು. ಈ ಎರಡೂ ಹೇಳಿಕೆಗಳ ವಿರುದ್ಧ ಆಯೋಗಕ್ಕೆ ದೂರು ನೀಡಲಾಗಿತ್ತು. ಆದರೆ ಚುನಾವಣಾ ಆಯೋಗ ಈ ಹೇಳಿಕೆಗಳಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ದೂರನ್ನು ತಿರಸ್ಕರಿಸಿದೆ.
Stay up to date on all the latest ದೇಶ news with The Kannadaprabha App. Download now