ಲೋಕಸಭಾ ಚುನಾವಣೆ 2019; 5ನೇ ಹಂತದ ಮತದಾನ, ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.36.73ರಷ್ಚು ಮತದಾನ

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.36.73 ಮತದಾನವಾಗಿದೆ ಎಂದು ತಿಳಿದುಬಂದಿದೆ.
5ನೇ ಹಂತದ ಮತದಾನ ಪ್ರಕ್ರಿಯೆ (ಚಿತ್ರಕೃಪೆ: ಎಎನ್ ಐ)
5ನೇ ಹಂತದ ಮತದಾನ ಪ್ರಕ್ರಿಯೆ (ಚಿತ್ರಕೃಪೆ: ಎಎನ್ ಐ)
ನವದೆಹಲಿ: ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಇಂದು ನಡೆಯುತ್ತಿರುವ 5ನೇ ಹಂತದ ಮತದಾನ ಪ್ರಕ್ರಿಯೆ ಚಾಲನೆಯಲ್ಲಿದ್ದು, ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.36.73 ಮತದಾನವಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ತನ್ನ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಿದ್ದು, ಬಿಹಾರದಲ್ಲಿ ಶೇ. 32.11 ರಷ್ಟು, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ. 10.67ರಷ್ಟು, ಜಾರ್ಖಂಡ್ ನಲ್ಲಿ ಶೇ. 42.29ರಷ್ಟು, ಮಧ್ಯ ಪ್ರದೇಶದಲ್ಲಿ ಶೇ. 37.33ರಷ್ಟು, ರಾಜಸ್ಥಾನದಲ್ಲಿ 37.41ರಷ್ಟು, ಉತ್ತರ ಪ್ರದೇಶದಲ್ಲಿ ಶೇ. 32.55ರಷ್ಟು ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ.45.58ರಷ್ಟು ಮತದಾನವಾಗಿದೆ.
7 ರಾಜ್ಯಗಳ 51 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನದಲ್ಲಿ ಸುಮಾರು 8.76 ಕೋಟಿ ಜನ ತಮ್ಮ ಮತದಾನ ಹಕ್ಕು ಚಲಾವಣೆ ಮಾಡಲಿದ್ದು, 674 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಮಾಡಲಿದ್ದಾರೆ.  ಉತ್ತರಪ್ರದೇಶದ 14 ಕ್ಷೇತ್ರ, ರಾಜಸ್ಥಾನದ 12, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶದಲ್ಲಿ ತಲಾ 7 ಕ್ಷೇತ್ರ, ಬಿಹಾರದಲ್ಲಿನ 5, ಜಾರ್ಖಂಡ್​​ ನ 4, ಜಮ್ಮು ಮತ್ತು ಕಾಶ್ಮೀರದ 2  (ಅನಂತ್ ನಾಗ್ ಹಾಗೂ ಲಡಾಖ್) ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. 
ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​, ಸ್ಮೃತಿ ಇರಾನಿ, ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಸೋನಿಯಾ ಗಾಂಧಿ ಸೇರಿದಂತೆ ಒಟ್ಟು 674 ಅಭ್ಯರ್ಥಿಗಳು 5ನೇ ಹಂತದ ಚುನಾವಣಾ ಕಣದಲ್ಲಿದ್ದಾರೆ.
ಲಖನೌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಗೃಹ ಸಚಿವ ರಾಜನಾಥ್​ ಸಿಂಗ್ ಇಂದು ಬೆಳಗ್ಗೆಯೇ ಸ್ಕಾಲರ್ಸ್​ ಹೋಮ್ ಹೈಸ್ಕೂಲ್​​ನ ಮತಗಟ್ಟೆ ಸಂಖ್ಯೆ 333ಕ್ಕೆ ತೆರಳಿ ಮತ ಚಲಾಯಿಸಿದರು. ಅಂತೆಯೇ ಸಚಿವ ರಾಜ್ಯವರ್ಧನ್​ ಸಿಂಗ್ ರಾಥೋಡ್ ಮತ್ತು ಪತ್ನಿ ಗಾಯತ್ರಿ ರಾಥೋಡ್​  ಜೈಪುರದಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಬಿಎಸ್​​ಪಿ ಮುಖ್ಯಸ್ಥೆ ಮಾಯಾವತಿ ಲಖನೌನ ಸಿಟಿ ಮಾಂಟೆಸ್ಸರಿ ಇಂಟರ್​ ಸ್ಕೂಲ್ ​ನ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com