ಬಡವರ ಬಗ್ಗೆ ಮಾತನಾಡುವಾಗ ಗೌರವ ಕೊಡಿ: ಮೋದಿಗೆ ರಾಹುಲ್ ಸಲಹೆ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಟೀಕಿಸುವ ಪ್ರಧಾನಿ ನರೇಂದ್ರ ಮೋದಿ ಬಡವರ ಬಗ್ಗೆ ಮಾತನಾಡುವಾಗ ಗೌರವ ಕೊಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಜಾರ್ಖಂಡ್ : ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಟೀಕಿಸುವ ಪ್ರಧಾನಿ ನರೇಂದ್ರ ಮೋದಿ ಬಡವರ ಬಗ್ಗೆ ಮಾತನಾಡುವಾಗ ಗೌರವ ಕೊಡುವಂತೆ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಚೈಬಾಸಾದಲ್ಲಿ ಚುನಾವಣಾ  ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮನರೇಗಾ ಯೋಜನೆಯನ್ನು ಅಪಮಾನಿಸುತ್ತಾರೆ. ಈ ಯೋಜನೆಯಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಿ ಕೋಟ್ಯಂತರ ಜನರಿಗೆ ಉದ್ಯೋಗ ಸಿಕ್ಕಿದ್ದರೂ ಕಾಂಗ್ರೆಸ್ ಏನು ಮಾಡಿಲ್ಲ ಎಂದು ಸಂಸತ್ತಿನಲ್ಲಿ ಮೋದಿ ಹೇಳುತ್ತಾರೆ. ಬಡವರಿಗೆ ಅಪಮಾನ ಮಾಡಬೇಡಿ, ಅವರಿಗೆ ಗೌರವ ಕೊಡಿ ಎಂದು ಹೇಳಿದರು.

ಮನರೇಗಾ ಯೋಜನೆ ಬಗ್ಗೆ ಎನ್ ಡಿ ಎ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ. ನೋಟ್ ಅಮಾನ್ಯತೆಯಿಂದ ಲೂಟಿ ಮಾಡಿ  15 ಪ್ರಭಾವಿ ವ್ಯಕ್ತಿಗಳಿಗೆ ಮೋದಿ 5 ಲಕ್ಷದ 55 ಸಾವಿರ ಕೋಟಿ ರೂ. ಹಣ ನೀಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ  ಟಾಟಾ ಕಂಪನಿಯಿಂದ ಸ್ವಾಧೀನಪಡಿಸಿಕೊಳ್ಳಲಾಗಿದ್ದ ಭೂಮಿಯನ್ನು ಮತ್ತೆ ಬುಡಕಟ್ಟು ಸಮುದಾಯಕ್ಕೆ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com