ತೇಜ್ ಬಹದ್ದೂರ್ ನಾಮಪತ್ರ ತಿರಸ್ಕಾರ: ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಮಾಜಿ ಯೋಧ, ಸಮಾಜವಾದಿ ಪಕ್ಷದ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕಾರಗೊಂಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್
ತೇಜ್ ಬಹದ್ದೂರ್ ನಾಮಪತ್ರ ತಿರಸ್ಕಾರ: ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ತೇಜ್ ಬಹದ್ದೂರ್ ನಾಮಪತ್ರ ತಿರಸ್ಕಾರ: ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ನವದೆಹಲಿ: ಮಾಜಿ ಯೋಧ, ಸಮಾಜವಾದಿ ಪಕ್ಷದ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕಾರಗೊಂಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 
ನಾಮಪತ್ರ ತಿರಸ್ಕೃತಗೊಂಡಿರುವುದರ ಕುರಿತು ಮೇ.09 ರೊಳಗೆ ಪ್ರತಿಕ್ರಿಯೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ. 
ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿದ್ದ ತಮ್ಮನ್ನು ಅನರ್ಹಗೊಳಿಸಿದ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಮಾಜಿಯೋಧ ತೇಜ್ ಬಹದ್ದೂರ್ ಯಾದವ್ ಸುಪ್ರೀಂ ಕೋಟ್ ಮೆಟ್ಟಿಲೇರಿದ್ದರು. 
ಸೇನೆಯಿಂದ ವಜಾಗೊಂಡ ವ್ಯಕ್ತಿ ಕನಿಷ್ಠ 5 ವರ್ಷ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂಬ ಕಾನೂನು ಉಲ್ಲೇಖಿಸಿ ಚುನಾವಣಾ ಆಯೋಗ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ಅಸಿಂಧುಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com