ದೆಹಲಿ ಮಹಿಳಾ ಆಯೋಗಕ್ಕೆ ಆತಿಶಿ ದೂರು: ಚುನಾವಣಾ ಆಯೋಗ, ಪೊಲೀಸರಿಗೂ ದೂರು ಸಲ್ಲಿಸಲು ಚಿಂತನೆ

ಪೂರ್ವ ದೆಹಲಿ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ತಮ್ಮ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯುಳ್ಳ ಕರಪತ್ರಗಳನ್ನು ಹಂಚುತ್ತಿದ್ದಾರೆ ಎಂದು ಆರೋಪ ಮಾಡಿರುವ ಎಎಪಿ ಅಭ್ಯರ್ಥಿ ಅತಿಶಿ, ಇಂದು ದೆಹಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಆತಿಶಿ
ಆತಿಶಿ

ನವದೆಹಲಿ: ಪೂರ್ವ ದೆಹಲಿ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ತಮ್ಮ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯುಳ್ಳ ಕರಪತ್ರಗಳನ್ನು ಹಂಚುತ್ತಿದ್ದಾರೆ ಎಂದು  ಆರೋಪ ಮಾಡಿರುವ ಎಎಪಿ ಅಭ್ಯರ್ಥಿ ಅತಿಶಿ, ಇಂದು  ದೆಹಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅತಿಶಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಒಂದು ವೇಳೆ ಗೌತಮ್ ಗಂಭೀರ್ ಈ ರೀತಿಯ ಕೆಲಸ ಮಾಡಿದ್ದರೆ ಹೇಗೆ ಮಹಿಳೆಯರಿಗೆ ರಕ್ಷಣೆಯ ಖಾತ್ರಿ ಒದಗಿಸುತ್ತಾರೆ ಎಂದು ಅವರು ಪ್ರಶ್ನಿಸಿದ್ದು, ದೆಹಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದೇನೆ. ಸದ್ಯದಲ್ಲೇ  ಚುನಾವಣಾ ಆಯೋಗ ಹಾಗೂ ಪೊಲೀಸರಿಗೂ ದೂರು ಸಲ್ಲಿಸುವುದಾಗಿ ತಿಳಿಸಿದರು.

ಗೌತಮ್ ಗಂಭೀರ್ ತಮ್ಮ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯುಳ್ಳ ಕರಪತ್ರ ಹಂಚಿಕೆ ಕುರಿತಂತೆ ಆತಿಶಿ ಸುದ್ದಿಗೋಷ್ಠಿ ನಡೆಸದಿದ್ದರೂ ದೆಹಲಿ ಮಹಿಳಾ ಆಯೋಗ ನಿನ್ನೆ  ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಆದಾಗ್ಯೂ, ಗಂಭೀರ್ ಈ ಆರೋಪವನ್ನು ತಳ್ಳಿ ಹಾಕಿದ್ದು, ಒಂದು ವೇಳೆ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ. ಅಲ್ಲದೇ, ಆತಿಶಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ , ಉಪಮುಖ್ಯಮಂತ್ರಿ ಮನಿಶ್ ಸಿಸೊಡಿಯಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ತಮ್ಮ ವಿರುದ್ಧ ಮಾನಹಾನಿ ಮಾಡಿದ್ದಕ್ಕಾಗಿ ಬೇಷರತ್ ಕ್ಷಮೆ ಯಾಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com