ಕೆಟ್ಟು ನಿಂತ ತಮ್ಮ ಹೆಲಿಕಾಪ್ಟರ್​ ರಿಪೇರಿ ಮಾಡಿದ ರಾಹುಲ್ ಗಾಂಧಿ, ಫೋಟೋ ವೈರಲ್

ಲೋಕಸಭಾ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋವೊಂದನ್ನು...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಲಖನೌ: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು,  ಹಿಮಾಚಲ ಪ್ರದೇಶದ ಊನದಲ್ಲಿ ತಮ್ಮ ಹೆಲಿಕಾಪ್ಟರ್​ಅನ್ನು ತಾವೇ ರಿಪೇರಿ ಮಾಡುತ್ತಿರುವ ದೃಶ್ಯ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ನಿನ್ನೆ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಈ ವೇಳೆ ರಾಹುಲ್​ ಗಾಂಧಿ ಮತ್ತು ಅವರ ಜೊತೆಗೆ ಇದ್ದವರೆಲ್ಲಾ ಹೆಲಿಕಾಪ್ಟರ್​ ರಿಪೇರಿ ಮಾಡಲು ಸಹಾಯ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ತಾವು ರಿಪೇರಿ ಕೆಲಸದಲ್ಲಿ ನಿರತರಾಗಿರುವ ಫೋಟೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ್ದು, ಅದಕ್ಕೆ "ಉತ್ತಮ ಒಗ್ಗಟ್ಟಿನ ಕೆಲಸದ ಮೂಲಕ ಸಮಸ್ಯೆ ಸರಿಪಡಿಸಲಾಗಿದೆ," ಎಂದು ಶೀರ್ಷಿಕೆ ನೀಡಿದ್ದಾರೆ.
"ಒಗ್ಗಟ್ಟಿನ ಕೆಲಸ ಅಂದರೆ ಡೆಕ್​ನಲ್ಲಿ ಇದ್ದವರೆಲ್ಲರೂ ಕೈ ಜೋಡಿಸಿ, ಹೆಲಿಕಾಪ್ಟರ್​ನಲ್ಲಿ ಕಾಣಿಸಿಕೊಂಡ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಒಗ್ಗಟಿನಿಂದ ಕೆಲಸ ಮಾಡಿದರೆ ಶೀಘ್ರದಲ್ಲಿ ಎಲ್ಲ ಸಮಸ್ಯೆ ಪರಿಹಾರ ಆಗಲಿವೆ. ಗಂಭೀರವಾದ ಸಮಸ್ಯೆ ಏನಿಲ್ಲ, ಧನ್ಯವಾದಗಳು," ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com