ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ಗೆ ಚುನಾವಣಾ ಆಯೋಗದ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ತಮ್ಮ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಕಣ್ಣೀರಿಟ್ಟಿದ್ದ ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ದಾಖಲಿಸಲು ಚುನಾವಣಾ ಆಯೋಗ ಸೂಚನೆ ನೀಡಿದೆ. 
ಪಶ್ಚಿಮ ಬಂಗಾಳದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಘಟಾಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಕಣಕ್ಕಿಳಿದಿದ್ದಾರೆ. 
ಮತದಾನದ ವೇಳೆ ಭದ್ರತಾ ಸಿಬ್ಬಂದಿಗಳ ಜೊತೆ ಮತಗಟ್ಟೆಯನ್ನು ಪ್ರವೇಶಿಸಿದ ಭಾರತಿ ಘೋಷ್ ಮೊಬೈಲ್ ಫೋನ್ ಮೂಲಕ ವಿಡಿಯೋ ತೆಗೆಯುವುದಕ್ಕೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಎಫ್ಐಆರ್ ದಾಖಲಿಸಲು ಸೂಚಿಸಿದೆ. 
ಮತಗಟ್ಟೆಯಿಂದ ನನ್ನನ್ನು ಹೊರದಬ್ಬಿದರು, ಹಲ್ಲೆಗೆ ಯತ್ನಿಸಿದರು ಎಂದು ಬಿಜೆಪಿ ಅಭ್ಯರ್ಥಿ ಘೋಷ್ ಕಣ್ಣೀರಿಟ್ಟಿದ್ದಾರೆ. ತೃಣಮೂಲ ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತರು ಭಾರತಿ ಘೋಷ್ ಅವರನ್ನು ಸುತ್ತುವರೆದು ಹಲ್ಲೆಗೆ ಮುಂದಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com