ಅಮಿತ್ ಶಾ ರೋಡ್ ಶೋ ವೇಳೆ ಘರ್ಷಣೆ, ಮಮತಾ ಪ್ರಚಾರ ನಡೆಸದಂತೆ ನಿರ್ಬಂಧಿಸುವಂತೆ ಆಯೋಗಕ್ಕೆ ಬಿಜೆಪಿ ಒತ್ತಾಯ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ವೇಳೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಆ ಪಕ್ಷದ ನಿಯೋಗವೊಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿತು
ಬಿಜೆಪಿ ನಿಯೋಗ
ಬಿಜೆಪಿ ನಿಯೋಗ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ರೋಡ್ ಶೋ ವೇಳೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ  ಆ ಪಕ್ಷದ ನಿಯೋಗವೊಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿತು

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವೀ,  ಅನಿಲ್ ಬಾಲೂನಿ , ಜಿವಿಎಲ್ ನರಸಿಂಹ ರಾವ್ ಮತ್ತಿತರು ನಿಯೋಗದಲ್ಲಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ತಾರ್ ಅಬ್ಬಾಸ್ ನಖ್ವೀ, ರೌಡಿ ಶೀಟರ್ ಗಳು ಹಾಗೂ  ಅಡ್ಡಿಯನ್ನುಂಟು ಮಾಡಿದ ಶಕ್ತಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಚಾರ ನಡೆಸದಂತೆ ನಿರ್ಬಂಧಿಸಬೇಕೆಂದು ಚುನಾವಣಾ ಆಯೋಗವನ್ನು ಒತ್ತಾಯಿಸಿರುವುದಾಗಿ ತಿಳಿಸಿದರು.

ಅಮಿತ್ ಶಾ ರೋಡ್ ಶೋ ವೇಳೆಯಲ್ಲಿ ಭಾರೀ ಹಿಂಸಾಚಾರ ಉಂಟಾದ ನಂತರ ಬಿಜೆಪಿಯ ಈ ನಾಯಕರು ಚುನಾವಣಾಧಿಕಾರಿಗಳನ್ನು ಭೇಟಿ ಮಾಡಿ ಮನವಿ  ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com