ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಾಹುಲ್ ಉತ್ತಮ ನಾಯಕ,ಫಲಿತಾಂಶದ ನಂತರ ಪ್ರಧಾನಿ ಅಭ್ಯರ್ಥಿ ಬಗ್ಗೆ ಒಮ್ಮತದ ನಿರ್ಧಾರ- ನಾಯ್ಡು

1996ರಂತೆ ಬಿಜೆಪಿಯೇತರ ಸರ್ಕಾರಗಳು ಕೇಂದ್ರದಲ್ಲಿ ಅಧಿಕಾರ ರಚಿಸಿದರೆ ಕಾಂಗ್ರೆಸ್ ಪಕ್ಷವನ್ನು ಹೊರಗಿಡುವ ತಪ್ಪನ್ನು ಮಾಡಬಾರದು ಎಂದು ಟಿಡಿಪಿ ಮುಖ್ಯಸ್ಥ ಎನ್ . ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಅಮರಾವತಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರದ ಬಗ್ಗೆ ಕಾಳಜಿ ಹೊಂದಿರುವ ಉತ್ತಮ ನಾಯಕರಾಗಿದ್ದಾರೆ. 1996ರಂತೆ ಬಿಜೆಪಿಯೇತರ ಸರ್ಕಾರಗಳು ಕೇಂದ್ರದಲ್ಲಿ ಅಧಿಕಾರ ರಚಿಸಿದರೆ ಕಾಂಗ್ರೆಸ್ ಪಕ್ಷವನ್ನು ಹೊರಗಿಡುವ ತಪ್ಪನ್ನು ಮಾಡಬಾರದು ಎಂದು ಟಿಡಿಪಿ ಮುಖ್ಯಸ್ಥ ಎನ್ . ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಬಿಜೆಪಿಯಿಂದ ಸರ್ಕಾರ ರಚನೆ ಅಸಾಧ್ಯ ಎಂದು ಹೇಳಿರುವ ಚಂದ್ರಬಾಬು ನಾಯ್ಡು ಸಮ್ಮಿಶ್ರ ಸರ್ಕಾರದ ಪರ ಬ್ಯಾಟ್ ಮಾಡಿದ್ದು, ಹೊಂದಾಣಿಕೆ ಉತ್ತಮ ಎಂದು ಹೇಳಿದ್ದಾರೆ.

ಬಿಜೆಪಿಯೇತರ ಪ್ರಧಾನ ಮಂತ್ರಿ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಚಂದ್ರಬಾಬು ನಾಯ್ಡು, ಪ್ರಾದೇಶಿಕ ಪಕ್ಷಗಳು ಕೂಡಿ ಸಮ್ಮಿಶ್ರ ಸರ್ಕಾರ ರಚಿಸಿದರೆ ಪ್ರತಿ ಪಕ್ಷವು ಪಡೆಯುವ ಸ್ಥಾನಗಳ ಸಂಖ್ಯೆ ಬಗ್ಗೆ ಸಮಾಲೋಚಿಸಿದ ನಂತರ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹತಾಶರಾಗಿದ್ದಾರೆ ಎಂದು ಚಂದ್ರಬಾಬು ನಾಯ್ಡು ಹೇಳಿದರು.

 ಚುನಾವಣೆಯಲ್ಲಿ ಗೆಲ್ಲಲು ಪ್ರಧಾನಿ ಅತ್ಯುತ್ತಮ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ ಆದರೆ, ದೇಶದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಪುಲ್ವಾಮಾ, ಬಾಲಾಕೋಟ್ ಏರ್ ಸ್ಟ್ರೈಕ್ ಬಗ್ಗೆ ಮಾತನಾಡುವ  ನರೇಂದ್ರ ಮೋದಿ ಏನನ್ನೂ ಸಾಧಿಸಿಲಿಲ್ಲ, ಯಾವುದೇ ಕಾರ್ಯಕ್ರಮದಲ್ಲೂ ಪ್ರತಿಪಕ್ಷಗಳನ್ನು ದೂಷಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದರು.
ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮಗಳಿಗೆ ತೆರಳಿದರೆ ಅವರು ಹತಾಶರಾಗಿರುವುದು ಗೊತ್ತಾಗುತ್ತದೆ. ಎಲ್ಲಾ ರಾಜಕಾರಣಿಗಳಿಗೂ ಬೆದರಿಕೆ ಹಾಕುವುದರಿಂದ ಅವರ ವಿರುದ್ಧ ಯಾರೊಬ್ಬರು ಧ್ವನಿ ಎತುತ್ತಿಲ್ಲ ಎಂದು ಚಂದ್ರಬಾಬು ನಾಯ್ಡು ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com