ವಿದ್ಯಾಸಾಗರ್ ಪ್ರತಿಮೆ ಧ್ವಂಸ, ಸಾಕ್ಷಿ ನಾಶಪಡಿಸಲು ಪೊಲೀಸರು ಪ್ರಯತ್ನ- ಪ್ರಧಾನಿ ಮೋದಿ

ವಿದ್ಯಾಸಾಗರ್ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ನಾಶಪಡಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

Published: 16th May 2019 12:00 PM  |   Last Updated: 16th May 2019 07:35 AM   |  A+A-


PM Modi

ಪ್ರಧಾನಿ ಮೋದಿ

Posted By : ABN ABN
Source : The New Indian Express
ಮಥುರಾಪುರ:  ವಿದ್ಯಾಸಾಗರ್  ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ನಾಶಪಡಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ಮಥುರಾಪುರದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಸೋಲಿನ ಭಯದಿಂದ ಹತಾಶೆಗೊಂಡಿದ್ದಾರೆ ಎಂದರು ಟೀಕಿಸಿದರು.

ವಿದ್ಯಾಸಾಗರ್ ಪ್ರತಿಮೆ ಧ್ವಂಸಗೊಳಿಸಿದವರಲ್ಲಿ ಟಿಎಂಸಿ ಗೂಂಡಾಗಳು ಇದ್ದಾರೆ. ಪೊಲೀಸರು ಇವರನ್ನು ರಕ್ಷಿಸುತ್ತಿದ್ದು,ಘಟನೆಗೆ ಸಂಬಂಧಿಸಿದ ಸಾಕ್ಷಿಗಳನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದ ಪ್ರಧಾನಿ,ಪ್ರತಿಮೆ ಧ್ವಂಸಗೊಳಿಸಿದವರನ್ನು ಸುಮ್ಮನೆ ಬಿಡುವುದಿಲ್ಲ , ಕಾನೂನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಠಿಣ ಸಂದೇಶ ರವಾನಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್  ಶೋ ವೇಳೆಯಲ್ಲಿ ಮಂಗಳವಾರ ಕೊಲ್ಕತ್ತಾದಲ್ಲಿ ಭಾರೀ ಹಿಂಸಾಚಾರ ಸಂಭವಿಸಿತ್ತು. ಈ ವೇಳೆಯಲ್ಲಿ ಟಿಎಂಸಿ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿ  19 ನೇ ಶತಮಾನದ ಸಮಾಜ ಸುಧಾರಕ ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು.

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದ ಮಮತಾ ಬ್ಯಾನರ್ಜಿ ಹತಾಶಗೊಂಡಿದ್ದಾರೆ.ಇದರಿಂದ ಆಕ್ರೋಶಗೊಂಡಿರುವ ಮಮತಾ ಬ್ಯಾನರ್ಜಿ  ಕೊಲ್ಕತ್ತಾಕ್ಕೆ ನಾನು ಬಾರದಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದರು.

ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಹಾಗೂ ಮಮತಾ ಬ್ಯಾನರ್ಜಿ ಜೋಡಿ ಬಂಗಾಳದಲ್ಲಿ ಲೂಟಿ ಮಾಡುವಲ್ಲಿ ಮಾತ್ರ ಹಿತಾಸಕ್ತಿ ಹೊಂದಿರುವುದಾಗಿ  ನರೇಂದ್ರ ಮೋದಿ ಟೀಕಿಸಿದರು
Stay up to date on all the latest ದೇಶ news with The Kannadaprabha App. Download now
facebook twitter whatsapp