ಮಹಾತ್ಮ ಗಾಂಧಿ ಪಾಕ್ ಪಿತಾಮಹ ಎಂದ ಅನಿಲ್ ಸೌಮಿತ್ರ ಬಿಜೆಪಿಯಿಂದ ಅಮಾನತು

ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರ ಅವರನ್ನು....

Published: 17th May 2019 12:00 PM  |   Last Updated: 17th May 2019 03:59 AM   |  A+A-


BJP suspends Anil Saumitra for calling Mahatma Gandhi 'Father of Pakistan'

ಅನಿಲ್ ಸೌಮಿತ್ರ

Posted By : LSB LSB
Source : Online Desk
ನವದೆಹಲಿ: ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಫೇಸ್ ಬುಕ್ ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರ ಅವರನ್ನು ಶುಕ್ರವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಅನಿಲ್ ಸೌಮಿತ್ರ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದ್ದು, ಏಳು ದಿನಗಳಲ್ಲಿ ವಿವರಣೆ ನೀಡುವಂತೆ ಸೂಚಿಸಲಾಗಿದೆ.

ಭಾರತವು ಸನಾತನ ದೇಶವಾಗಿದೆ. ಭಾರತದಿಂದ ಪಾಕಿಸ್ತಾನ ನಿರ್ಮಾಣವಾಗಿದೆ. ಹೀಗಾಗಿ ಮಹಾತ್ಮ ಗಾಂಧಿ ಪಾಕಿಸ್ತಾನಕ್ಕೆ ಪಿತಾಮಹರೇ ಹೊರತು ಭಾರತಕ್ಕಲ್ಲ ಎಂದು ಪೋಸ್ಟ್ ಹಾಕಿದ್ದರು.

ತಮ್ಮ ಹೇಳಿಕೆಯ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅನಿಲ್ ಸೌಮಿತ್ರ ಅವರು, ಭಾರತದಿಂದ ಜವಾಹರಲಾಲ್ ನೆಹರು ಹಾಗೂ ಪಾಕಿಸ್ತಾನದಿಂದ ಮೊಹಮ್ಮದ್ ಅಲಿ ಜಿನ್ನಾ ಸೇರಿ ಎರಡು ರಾಷ್ಟ್ರಗಳನ್ನು ನಿರ್ಮಾಣ ಮಾಡಿದರು. ದೇಶ ವಿಭಜನೆ ಮಹಾತ್ಮ ಗಾಂಧಿ ಮುಂದೆಯೇ ಆಗಿದೆ. ಹೀಗಾಗಿ ಗಾಂಧೀಜಿ ಪಾಕಿಸ್ತಾನಕ್ಕೆ ಪಿತಾಮಹರು ಎಂದು ಹೇಳಿದ್ದರು.

ವಿವಾದಾತ್ಮಕ ಹೇಳಿಕೆ ನೀಡಿದ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದ್ದು, ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪರವಾಗಿ ಹೇಳಿಕೆ ನೀಡುತ್ತಿರುವ ಉಳಿದ ನಾಯಕರಿಗೂ ಈ ಬಿಸಿ ತಟ್ಟುವ ಸಾಧ್ಯತೆಗಳಿವೆ ಎನ್ನಲಾಗಿದೆ.
Stay up to date on all the latest ದೇಶ news with The Kannadaprabha App. Download now
facebook twitter whatsapp