ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಮೋದಿ, ಶಾ ಜಂಟಿ ಸುದ್ದಿಗೋಷ್ಠಿ

ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ....

Published: 17th May 2019 12:00 PM  |   Last Updated: 17th May 2019 07:08 AM   |  A+A-


We'll return with a bigger majority, declare Modi, Shah at joint briefing

ನರೇಂದ್ರ ಮೋದಿ

Posted By : LSB LSB
Source : The New Indian Express
ನವದೆಹಲಿ: ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಐದು ವರ್ಷಗಳ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತೃಪ್ತಿಯಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಏಳನೇ ಹಾಗೂ ಕೊನೆಯ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಪ್ರತಿ 15 ದಿನಗಳಿಗೊಂದು ಹೊಸ ಯೋಜನೆಯನ್ನು ಪ್ರಕಟಿಸಿದೆ. ಕಳೆದ ಐದು ವರ್ಷಗಳಲ್ಲಿ ಮೋದಿ ಸರ್ಕಾರ ಸಮಾಜದ ದುರ್ಬಲ ವರ್ಗದ ಅಭಿವೃದ್ಧಿಗೆ 133 ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಮೋದಿ ಆಡಳಿತದಲ್ಲಿ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರಕ್ಕೆ ಆಸ್ಪದವೇ ಇಲ್ಲ. ಮೋದಿ ಸರ್ಕಾರದಲ್ಲಿ ದೇಶದ ಜನತೆ ಸುರಕ್ಷಿತ ಭಾವನೆ ಹೊಂದಿದ್ದಾರೆ ಎಂದರು.

ಕೇಂದ್ರ ಸರ್ಕಾರದ ನಾನಾ ಯೋಜನೆಗಳಿಂದ 50 ಕೋಟಿ ಜನರು ಲಾಭ ಪಡೆದಿದ್ದಾರೆ. ಬಡವರು, ಮಹಿಳೆಯರು ಮತ್ತು ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ 'ವಿಕಾಸ' ಅಜೆಂಡಾ ಭಾರತವನ್ನೇ ಬದಲಾಯಿಸಿದೆ ಎಂದು ಅಮಿತ್ ಶಾ ಹೇಳಿದರು.

ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಕಳೆದ 2 ಚುನಾವಣೆಗಳ ಸಂದರ್ಭ ಐಪಿಎಲ್‌ ನಡೆಸಲು ಸಾಧ್ಯವಾಗಿರಲಿಲ್ಲ. ಬಲಿಷ್ಠ ಸರ್ಕಾರವಿದ್ದಾಗ ಐಪಿಎಲ್, ರಮ್ಜಾನ್‌, ಪರೀಕ್ಷೆಗಳು ಮತ್ತು ಇತರ ಹಲವು ಕಾರ್ಯಗಳನ್ನು ಶಾಂತಿಯುತವಾಗಿ, ವ್ಯವಸ್ಥಿತವಾಗಿ ನಡೆಸಲು ಸಾಧ್ಯವಾಯಿತು ಎಂದರು.

ದೀರ್ಘ ಕಾಲದ ಬಳಿಕ ಸತತ ಎರಡನೇ ಅವಧಿಗೆ ಸರ್ಕಾರವೊಂದು ಮತ್ತೆ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುತ್ತಿರುವುದು ಇದೇ ಮೊದಲು. ನನಗೆ ದೊರೆತ ಬೆಂಬಲದಿಂದ ಮನಸ್ಸು ತುಂಬಿ ಬಂದಿದೆ. ನನಗೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನಮ್ಮ ಪ್ರಜಾಪ್ರಭುತ್ವದ ಶಕ್ತಿ ಜಗತ್ತಿಗೇ ತಿಳಿದಿದೆ. ಜಗತ್ತಿನ ಮೇಲೆ ಪ್ರಭಾವ ಬೀರುವ ಶಕ್ತಿ ಭಾರತಕ್ಕಿದೆ ಎಂದು ಪ್ರಧಾನಿ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ತಮಗೆ ದೇಶದ ಸಂಪೂರ್ಣ ಸಹಕಾರ ದೊರೆತಿದ್ದು, ದೇಶಸೇವೆ ಮಾಡಲು ಅವಕಾಶ ದೊರೆತಿದ್ದು ತಮ್ಮ ಪೂರ್ವ ಜನ್ಮದ ಪುಣ್ಯ ಎಂದು ಹೇಳಿದರು. ಇದೇ ವೇಳೆ ದೇಶ ಮುನ್ನಡೆಸುವಲ್ಲಿ ಮಾಧ್ಯಮಗಳೂ ಕೂಡ ತಮಗೆ ಸಹಕಾರ ನೀಡಿದ್ದು, ಇದಕ್ಕಾಗಿ ನಾನು ಮಾಧ್ಯಮ ಲೋಕಕ್ಕೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಮೋದಿ ಹೇಳಿದರು.
Stay up to date on all the latest ದೇಶ news with The Kannadaprabha App. Download now
facebook twitter whatsapp