36 ಗಂಟೆಗಳಲ್ಲಿ ಬಹಿರಂಗ ಕ್ಷಮೆ ಕೇಳಿ, ಇಲ್ಲವಾದರೆ ಕಠಿಣಕ್ರಮ; ಪಿಎಂ ಮೋದಿಗೆ ಮಾನನಷ್ಟ ಮೊಕದ್ದಮೆ ನೋಟಿಸ್!

36 ಗಂಟೆಗಳ ಅವಧಿಯಲ್ಲಿ ಪ್ರಧಾನಿ ಮೋದಿ ತಮಗೆ ಬಹಿರಂಗ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕೋಲ್ಕತಾ: 36 ಗಂಟೆಗಳ ಅವಧಿಯಲ್ಲಿ ಪ್ರಧಾನಿ ಮೋದಿ ತಮಗೆ ಬಹಿರಂಗ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಅಭಿಷೇಕ್ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿದ್ದು, 36 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಿದ್ದು, ಉತ್ತರಿಸುವಲ್ಲಿ ವಿಫಲರಾದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಬುಧವಾರ ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ನಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಪ್ರಧಾನಿ ಮೋದಿ ತಮ್ಮ ವಿರುದ್ಧ ಹುಚ್ಚುಚಾಗಿ, ತಳಬುಡವಿಲ್ಲದ ಆರೋಪಗಳನ್ನು ಮಾಡಿದ್ದಾರೆ. ಆ ಮೂಲಕ ತಮ್ಮ ಮಾನಹಾನಿಗೆ ಯತ್ನಿಸಿದ್ದಾರೆ. ಹೀಗಾಗಿ ತಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿದ್ದೇನೆ ಎಂದು ಅಭಿಷೇಕ್ ಬ್ಯಾನರ್ಜಿ ತಮ್ಮ ನೋಟಿಸ್ ನಲ್ಲಿ ಹೇಳಿದ್ದಾರೆ.
ಡೈಮಂಡ್ ಹಾರ್ಬರ್ ನಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಈ ವೇಳೆ ಬಂಗಾಳದಲ್ಲಿ ಭುವಾ-ಭತೀಜಾ ದರ್ಬಾರ್ ನಡೆಯುತ್ತಿದೆ. ಡೆಮಾಕ್ರಸಿ ಹೋಗಿ ಗೂಂಡಾಕ್ರಸಿ ತಾಂಡವವಾಡುತ್ತಿದೆ ಎಂದು ಕಿಡಿಕಾರಿದ್ದರು. ಇದೇ ವಿಚಾರವಾಗಿ ಅಭಿಷೇಕ್ ಬ್ಯಾನರ್ಜಿ ಪ್ರಧಾನಿ ಮೋದಿ ಅವರಿಗೆ ಮಾನನಷ್ಟ ನೋಟಿಸ್ ಜಾರಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com