ರಾಹುಲ್ ಭೇಟಿಯಾದ ಚಂದ್ರಬಾಬು ನಾಯ್ಡು, ಬಿಜೆಪಿ ವಿರೋಧಿ ಒಕ್ಕೂಟ ರಚನೆಗೆ ಚಾಲನೆ

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮುನ್ನವೇ ಚುನಾವಣೋತ್ತರ ಮೈತ್ರಿಗೆ ವೇದಿಕೆ ಸಿದ್ಧಪಡಿಸಲು ಮುಂದಾಗಿರುವ ಆಂಧ್ರ ಪ್ರದೇಶ...
ಚಂದ್ರಬಾಬು ನಾಯ್ಡು, ರಾಹುಲ್ ಗಾಂಧಿ
ಚಂದ್ರಬಾಬು ನಾಯ್ಡು, ರಾಹುಲ್ ಗಾಂಧಿ
ನವದೆಹಲಿ: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮುನ್ನವೇ ಚುನಾವಣೋತ್ತರ ಮೈತ್ರಿಗೆ ವೇದಿಕೆ ಸಿದ್ಧಪಡಿಸಲು ಮುಂದಾಗಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಶನಿವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ ವಿರೋಧಿ ಮೈತ್ರಿಕೂಟ ರಚನೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ನಾಯ್ಡು, ಬಿಜೆಪಿ ವಿರೋಧಿ ಒಕ್ಕೂಟ ರಚನೆ ಬಗ್ಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.
ಚಂದ್ರ ಬಾಬು ನಾಯ್ಡು ಅವರು ರಾಹುಲ್ ಭೇಟಿಯ ಬಳಿಕ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು ಲಖನೌದಲ್ಲಿ ಭೇಟಿ ಮಾಡಲಿದ್ದಾರೆ.
ನಾಯ್ಡು ಅವರು ನಿನ್ನೆಯಷ್ಟೇ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.
ನಾಳೆ ಏಳನೆ ಹಾಗೂ ಕೊನೆಯ ಹಂತದ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಮೇ 23ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com