ಲೋಕಾ ಸಮರ 2019; 7ನೇ ಮತ್ತು ಅಂತಿಮ ಹಂತದ ಮತದಾನಕ್ಕೆ ವೇದಿಕೆ ಸಿದ್ಧ

ಲೋಕಸಭಾ ಚುನಾವಣೆ 2019ರ 7ನೇ ಮತ್ತು ಅಂತಿಮ ಹಂತದ ಮತದಾನ ಭಾನುವಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ.
ಅಂತಿಮ ಹಂತದ ಮತದಾನಕ್ಕೆ ವೇದಿಕೆ ಸಿದ್ಧ
ಅಂತಿಮ ಹಂತದ ಮತದಾನಕ್ಕೆ ವೇದಿಕೆ ಸಿದ್ಧ
ನವದೆಹಲಿ: ಲೋಕಸಭಾ ಚುನಾವಣೆ 2019ರ 7ನೇ ಮತ್ತು ಅಂತಿಮ ಹಂತದ ಮತದಾನ ಭಾನುವಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ.
ಕಳೆದೊಂದು ತಿಂಗಳಿಂದ ಕಳೆಗಟ್ಟಿದ್ದ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ವೇದಿಕೆ ಸಜ್ಜಾಗಿದ್ದು, ಭಾನುವಾರ ನಡೆಯಲಿರುವ 7ನೇ ಹಾಗೂ ಅಂತಿಮ ಹಂತದ ಮತದಾನದಲ್ಲಿ ಒಟ್ಟು 8 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಉತ್ತರ ಪ್ರದೇಶ ಮತ್ತು ಪಂಜಾಬ್ ನ ತಲಾ 13 ಕ್ಷೇತ್ರಗಳು, ಪಶ್ಚಿಮ ಬಂಗಾಳದ 9,  ಬಿಹಾರ ಮತ್ತು ಮದ್ಯ ಪ್ರದೇಶದ ತಲಾ  ಕ್ಷೇತ್ರಗಳು, ಹಿಮಾಚಲ ಪ್ರದೇಶದ ನಾಲ್ಕು, ಜಾರ್ಖಂಡ್ ನ ಮೂರು ಮತ್ತ ಕೇಂದ್ರಾಡಳಿತ ಪ್ರದೇಶ ಚಂಡೀಘಡದ ಒಂದು ಕ್ಷೇತ್ರ ಸೇರಿದಂತೆ ಒಟ್ಟು 59 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಪ್ರಮುಖವಾಗಿ ವಾರಣಾಸಿ ಕ್ಷೇತ್ರದಿಂದ 2ನೇ ಬಾರಿಗೆ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದ್ದು, ಒಟ್ಟು 10.01 ಲಕ್ಷ ಮತದಾರರು ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾರೆ. ಇದೇ ಮೇ 23ರಂದು ಲೋಕಾಸಮರದ ಫಲಿತಾಂಶ ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com