ಚುನಾವಣೋತ್ತರ ಸಮೀಕ್ಷೆ ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಪಂಜಾಬ್ ಸಿಎಂ

ಚುನಾವಣೋತ್ತರ ಸಮೀಕ್ಷೆಗಳು ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಸಾಕಷ್ಟು ಬಾರಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆದ ಉದಾಹರಣೆಗಳೂ ಕೂಡ ಇದೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

Published: 19th May 2019 12:00 PM  |   Last Updated: 19th May 2019 09:30 AM   |  A+A-


Don't think exit polls are accurate, says Capt Amarinder Singh

ಸಂಗ್ರಹ ಚಿತ್ರ

Posted By : SVN SVN
Source : ANI
ಅಮೃತಸರ: ಚುನಾವಣೋತ್ತರ ಸಮೀಕ್ಷೆಗಳು ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಸಾಕಷ್ಟು ಬಾರಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆದ ಉದಾಹರಣೆಗಳೂ ಕೂಡ ಇದೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ನಡೆದ ಎಲ್ಲ ಏಳೂ ಹಂತದ ಮತದಾನ ಇಂದು ಮುಕ್ತಾಯಗೊಂಡಿದ್ದು, ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಅತ್ತ ಎಲ್ಲ ರಾಷ್ಟ್ರೀಯ ಸುದ್ದಿವಾಹಿನಿಗಳು ವಿವಿದ ಮೂಲಗಳ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸುತ್ತಿವೆ. ಪ್ರಸ್ತುತ ಬಹಿರಂಗವಾಗಿರುವ ಬಹುತೇಕ ಎಲ್ಲ ಸಮೀಕ್ಷೆಗಳಲ್ಲೂ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಮತ್ತೆ ಅಧಿಕಾರ ಹಿಡಿಯುವ ಸಾಧ್ಯತೆಗಳ ಕುರಿತು ಅಂಕಿ-ಅಂಶಗಳನ್ನು ನೀಡಿವೆ.

ಇದೇ ವಿಚಾರವಾಗಿ ಮಾತನಾಡಿರುವ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ಚುನಾವಣೋತ್ತರ ಸಮೀಕ್ಷೆಗಳನ್ನು ಅಲ್ಲಗಳೆದಿದ್ದು, ಚುನಾವಣೋತ್ತರ ಸಮೀಕ್ಷೆಗಳು ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಸಾಕಷ್ಟು ಬಾರಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆದ ಉದಾಹರಣೆಗಳೂ ಕೂಡ ಇದೆ ಹೇಳಿದ್ದಾರೆ.

ಅಂತೆಯೇ ಚುನಾವಣೋತ್ತರ ಸಮೀಕ್ಷೆಗಳು ಏನೇ ಹೇಳಲಿ ಕಾಂಗ್ರೆಸ್ ಪಕ್ಷ ರಾಜ್ಯ ಮಟ್ಟದಲ್ಲಿ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಲಿದ್ದು, ಮುಂದಿನ ಬಾರಿ ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಪ್ರಸ್ತುತ ಪ್ರಕಟವಾಗಿರುವ ಸಮೀಕ್ಷೆಗಳಲ್ಲಿನ ಅಂಕಿಅಂಶಗಳ ಅನ್ವಯ ಪಂಜಾಬ್ ನಲ್ಲಿ ಕಾಂಗ್ರೆಸ್ ಉತ್ತಮ ಫಲಿತಾಂಶ ಪಡೆಯುವ ಸಾಧ್ಯತೆ ಇದ್ದು ಒಟ್ಟು 13 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಗೆ 9-10 ಸ್ಥಾನ ಲಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Stay up to date on all the latest ದೇಶ news with The Kannadaprabha App. Download now
facebook twitter whatsapp