ಚುನಾವಣೋತ್ತರ ಸಮೀಕ್ಷೆ 2019; ಆರೇ ತಿಂಗಳಲ್ಲಿ ಕಾಂಗ್ರೆಸ್ ಭದ್ರಕೋಟೆಗೆ ಬಿಜೆಪಿ ಲಗ್ಗೆ?

ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯವಾದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಂಡಿದ್ದು, ಆರು ತಿಂಗಳ ಹಿಂದೆ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರಗಳು ಈಗ ಬಿಜೆಪಿ ತೆಕ್ಕೆಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯವಾದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಂಡಿದ್ದು, ಆರು ತಿಂಗಳ ಹಿಂದೆ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರಗಳು ಈಗ ಬಿಜೆಪಿ ತೆಕ್ಕೆಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೌದು.. ಈಗ್ಗೆ ಆರು ತಿಂಗಳ ಹಿಂದಷ್ಟೇ ಅಂದರೆ ಕಳೆದ ಡಿಸೆಂಬರ್ ನಲ್ಲಿ ನಡೆದಿದ್ದ ಲೋಕಸಭಾ ಉಪ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ತನ್ನ ಪ್ರಾಬಲ್ಯ ಮೆರೆದಿದ್ದ ಕಾಂಗ್ರೆಸ್ ಅದೇ ಮೂರು ರಾಜ್ಯಗಳಲ್ಲಿ ಈ ಭಾರಿ ಮುಖಭಂಗಕ್ಕೀಡಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಹಿಂದೆ ರಾಜಸ್ತಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ ಘಡದಲ್ಲಿ ನಡೆದಿದ್ದ ಉಪ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್ ಪಕ್ಷ ಕೇವಲ ಆರೇ ತಿಂಗಳಲ್ಲಿ ತನ್ನ ಛಾಪು ಕಳೆದುಕೊಂಡಿದ್ದು, ಈ ಬಾರಿ ಈ ಕ್ಷೇತ್ರಗಳಲ್ಲಿ ಮುಖಭಂಗಕ್ಕೀಡಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪೋಲ್ ಆಫ್ ಪೋಲ್ಸ್ ನ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಈ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 13 ಸ್ಥಾನ ಕೂಡ ಪಡೆಯುವುದು ಕಷ್ಟ ಎಂದು ಹೇಳಲಾಗಿದೆ. ಅಂತೆಯೇ ಪ್ರಸ್ತುತ ಬಿಡುಗಡೆಯಾಗಿರುವ 10 ಸಂಸ್ಥೆಗಳ ಎಕ್ಸಿಟ್ ಪೋಲ್ ನಲ್ಲಿ ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಪಕ್ಷ 11 ಲೋಕಸಭಾ ಕ್ಷೇತ್ರಗಳ ಪೈಕಿ 4 ಸ್ಥಾನ ಪಡೆಯುವ ಸಾಧ್ಯತೆ ಇದೆ. ಅಂತೆಯೇ ಬಿಜೆಪಿ 7 ಸ್ಥಾನದಲ್ಲಿ ಜಯಭೇರಿ ಭಾರಿಸಲಿದೆ ಎಂದು ಹೇಳಲಾಗಿದೆ.
ಇತ್ತ ರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಕಳೆದ ವರ್ಷ ಅಖಿಲೇಶ್ ಯಾದವ್ ಮತ್ತು ಮಾಯವತಿ ಅವರ ನೆರವಿನಿಂದ ಅಧಿಕಾರ ರಚನೆ ಮಾಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಮತದಾರ ಕೈ ಕೊಟ್ಟಿದ್ದು, ರಾಜಸ್ಥಾನದ ಒಟ್ಟು 25 ಕ್ಷೇತ್ರಗಳ ಪೈಕಿ ಬಿಜೆಪಿ ಪಕ್ಷವೇ 22 ಸ್ಥಾನ ಪಡೆಯುವ ಸಾಧ್ಯತೆ ಎಂದು ಹೇಳಲಾಗಿದೆ. ಅಂತೆಯೇ ಮಧ್ಯ ಪ್ರದೇಶದಲ್ಲಿ ಬಿಜೆಪಿ 27 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದ್ದು, ಕಾಂಗ್ರೆಸ್ ಕೇವಲ 2 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಳ್ಳಬಹುದು ಎನ್ನಲಾಗಿದೆ.
ಅಂತೆಯೇ ಉತ್ತರ ಪ್ರದೇಶದ 29 ಕ್ಷೇತ್ರಗಳ ಪೈಕಿ ಬಿಜೆಪಿ 23ರಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com