ಚುನಾವಣೋತ್ತರ ಸಮೀಕ್ಷೆ ಬಹಿರಂಗ ಬೆನ್ನಲ್ಲೇ ಸೋನಿಯಾ ಭೇಟಿ ಮಾಡಲಿರುವ ಮಾಯಾವತಿ

ಮಹತ್ವದ ಬೆಳವಣಿಗೆಯಲ್ಲಿ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾದ ಬೆನ್ನಲ್ಲೇ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಸೋನಿಯಾ ಗಾಂಧಿ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾದ ಬೆನ್ನಲ್ಲೇ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಸೋನಿಯಾ ಗಾಂಧಿ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿದ್ದು, ಹಾಲಿ ಲೋಕಸಭಾ ಚುನಾವಣೆಯಲ್ಲಿ  ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಹೊರಗಿಟ್ಟು ತನ್ನ ಸಾಂಪ್ರದಾಯಿಕ ಎದುರಾಳಿಯಾಗಿದ್ದ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಿದ್ದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಇದೀಗ ಮತ್ತೆ ಕಾಂಗ್ರೆಸ್‌ ನತ್ತ ಸ್ನೇಹ ಹಸ್ತ ಚಾಚಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಮಾಯಾವತಿ ಮತ್ತು ಸೋನಿಯಾ ಗಾಂಧಿ ಭೇಟಿಯಾಗುತ್ತಿದ್ದು, ಮಾಯಾವತಿ ಮತ್ತು ಸೋನಿಯಾ ಭೇಟಿಗೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಮಧ್ಯಸ್ಥಿಕೆ ವಹಿಸಲಿದ್ದಾರೆ ಎನ್ನಲಾಗಿದೆ.
ಇನ್ನು ನಾಳಿನ ಭೇಟಿಯಲ್ಲಿ ಮಾಯಾವತಿ ಕೇವಲ ಸೋನಿಯಾ ಗಾಂಧಿ ಅವರನ್ನು ಮಾತ್ರವಲ್ಲದೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೂ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com