ಇಂದು ರಾತ್ರಿ ದೇವೇಗೌಡ, ಕುಮಾರಸ್ವಾಮಿಯನ್ನು ಭೇಟಿಮಾಡಲಿದ್ದಾರೆ ಚಂದ್ರಬಾಬು ನಾಯ್ಡು

ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್...

Published: 21st May 2019 12:00 PM  |   Last Updated: 21st May 2019 08:37 AM   |  A+A-


Chandrababu Naidu to meet JD(S) leader HD Deve Gowda, Karnataka CM HD Kumaraswamy in Bengaluru

ಚಂದ್ರಬಾಬು ನಾಯ್ಡು

Posted By : LSB LSB
Source : ANI
ಬೆಂಗಳೂರು: ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ  ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ.

ಇಂದು ಮಧ್ಯಾಹ್ನ ದೆಹಲಿಯಲ್ಲಿ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ ಚಂದ್ರಬಾಬು ನಾಯ್ಡು ಅವರು ಈಗ ಬೆಂಗಳೂರಿಗೆ ಆಗಮಿಸಿ, ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿದ್ದಾರೆ.

ದೆಹಲಿಯಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಭಾಗವಹಿಸಬೇಕಿತ್ತು. ಆದರೆ ಈ ಇಬ್ಬರು ನಾಯಕರು ಕೊನೆಗಳಿಯಲ್ಲಿ ದೆಹಲಿ ಪ್ರವಾಸ ರದ್ದು ಮಾಡಿದ್ದರು. ಹೀಗಾಗಿ ಚಂದ್ರಬಾಬು ನಾಯ್ಡು ಅವರು ದೇವೇಗೌಡರನ್ನು ಭೇಟಿ ಮಾಡಲು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನೆಲೆ ಹಾಗೂ ಎಕ್ಸಿಟ್‌ ಪೋಲ್‌ನಲ್ಲಿ ಹೊರಹೊಮ್ಮಿರುವ ಫಲಿತಾಂಶದ ಕುರಿದು ನಾಯ್ಡು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 
Stay up to date on all the latest ದೇಶ news with The Kannadaprabha App. Download now
facebook twitter whatsapp