ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಪದಗ್ರಹಣ ಸಮಾರಂಭ ಸಾಧ್ಯತೆ

ನೂತನ ಸರ್ಕಾರದ ಪದಗ್ರಹಣ ಸಮಾರಂಭ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆಯುವ ಸಾಧ್ಯತೆ ಇದೆ.

Published: 21st May 2019 12:00 PM  |   Last Updated: 21st May 2019 01:41 AM   |  A+A-


Rashtrapati Bhavan

ರಾಷ್ಟ್ರಪತಿ ಭವನ

Posted By : ABN ABN
Source : PTI
ನವದೆಹಲಿ: ನೂತನ ಸರ್ಕಾರದ ಪದಗ್ರಹಣ ಸಮಾರಂಭ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆಯುವ ಸಾಧ್ಯತೆ ಇದೆ.

ಹದಿನೇಳನೇ ಲೋಕಸಭೆಗೆ ಆಯ್ಕೆಯಾದ  542 ನೂತನ ಸಂಸದರ ಪಟ್ಟಿಯನ್ನು ಮೇ 25 ರಂದು ಸಂಜೆ 5 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಚುನಾವಣಾ ಆಯೋಗ ಸಲ್ಲಿಸುವ ಸಾಧ್ಯತೆ ಇದೆ.

ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ನೇತೃತ್ವದ ಮೂವರು ಚುನಾವಣಾ ಆಯುಕ್ತರು ಈ ಪಟ್ಟಿಯನ್ನು ರಾಷ್ಟ್ರಪತಿಗೆ ನೀಡುತ್ತಾರೆ. ಈ ಪ್ರಕ್ರಿಯೆ ಮುಗಿದ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಪಕ್ಷವನ್ನು ಸರ್ಕಾರ ರಚಿಸಲು ರಾಷ್ಟ್ರಪತಿ ಆಹ್ವಾನಿಸುತ್ತಾರೆ.

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಪದಗ್ರಹಣ ಸಮಾರಂಭ ನಡೆಯುವ ಸಾಧ್ಯತೆ ಇದೆ. ಅದನ್ನು ಹೊರತುಪಡಿಸಿ ರಾಷ್ಟ್ರಪತಿ ಭವನದ ಪೋರ್ ಕೋರ್ಟ್   ಇದೆ. ಆದರೆ, ಅಲ್ಲಿ ಸಮಾರಂಭ ನಡೆಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪದಗ್ರಹಣಕ್ಕೆ ಪೋರ್ ಕೋರ್ಟ್  ಬಳಸಿಕೊಳ್ಳಲಾಗಿತ್ತು. ಆದರೆ, ಈ ಬಾರಿ ಉಷ್ಣತೆ ಹೆಚ್ಚಾಗಿದ್ದು, ವಿಪರೀತ ಬಿಸಿಯಿಂದಾಗಿ ಸಮಾರಂಭಕ್ಕೆ ಅದು ಉತ್ತಮವಾದ ಸ್ಥಳವಲ್ಲ ಎಂಬ ಪ್ರತಿಕ್ರಿಯೆಗಳು ಕೇಳಿಬರುತ್ತಿವೆ.

 ಚುನಾವಣೋತ್ತರ ಸಮೀಕ್ಷೆಗಳಂತೆ ನರೇಂದ್ರ ಮೋದಿ ಅವರೇ ಪ್ರಧಾನಿಯಾದರೆ, ಕೆಲವೇ ಮಂದಿ ಆಹ್ವಾನಿಸಿ ಸರಳವಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.
Stay up to date on all the latest ದೇಶ news with The Kannadaprabha App. Download now
facebook twitter whatsapp