ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ; ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆ, ಸಿಎಂ ನಾಯ್ಡು ರಾಜಿನಾಮೆ!

ಲೋಕಸಭಾ ಚುನಾವಣೆ ಜೊತೆ ಜೊತೆಯಲ್ಲೇ ಆಂಧ್ರ ಪ್ರದೇಶ ವಿಧಾನಸಭೆಗೂ ಚುನಾವಣಾ ಫಲಿತಾಂಶವೂ ಪ್ರಕಟಗೊಂಡಿದ್ದು, ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆಗೈದ ಹಿನ್ನಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಅಮರಾವತಿ: ಲೋಕಸಭಾ ಚುನಾವಣೆ ಜೊತೆ ಜೊತೆಯಲ್ಲೇ ಆಂಧ್ರ ಪ್ರದೇಶ ವಿಧಾನಸಭೆಗೂ ಚುನಾವಣಾ ಫಲಿತಾಂಶವೂ ಪ್ರಕಟಗೊಂಡಿದ್ದು, ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆಗೈದ ಹಿನ್ನಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ ಹೀನಾಯ ಸೋಲಿನತ್ತ ಮುಖ ಮಾಡಿದ್ದು, ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ಚಂದ್ರಬಾಬು ನಾಯ್ಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ಸಂಜೆ ಆಂಧ್ರಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿದ ನಾಯ್ಡು ಅವರು ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
175 ಸದಸ್ಯ ಬಲದ ಆಂಧ್ರಪ್ರದೇಶದಲ್ಲಿ 149 ಕ್ಷೇತ್ರಗಳಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 25 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಆಂಧ್ರ ಪ್ರದೇಶದಲ್ಲಿ ಸರ್ಕಾರ ರಚನೆಗಾಗಿ 88 ಕ್ಷೇತ್ರಗಳ ಅಗತ್ಯತೆ ಇದ್ದು, ಈಗಾಗಲೇ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಮ್ಯಾಜಿಕ್ ನಂಬರ್ ಅನ್ನೂ ದಾಟಿದೆ. ಹೀಗಾಗಿ ಆಂಧ್ರ ಪ್ರದೇಶದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವ ಸರ್ಕಾರ ರಚನೆಯಾಗಲಿದೆ. ಇದೇ ಮೇ 30ರಂದು ಜಗನ್ ಮೋಹನ್ ರೆಡ್ಡಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 
ಮೂಲಗಳ ಪ್ರಕಾರ ರಾಜಧಾನಿ ಅಮರಾವತಿ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿರುವುದರಿಂದ ತಿರುಪತಿಯಲ್ಲಿ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com