ಕರ್ನಾಟಕ

ಮಂಡ್ಯ: ನಟ ದರ್ಶನ್ ಕಾರಿನ ಮೇಲೆ ಕಲ್ಲು ತೂರಾಟ, ಸುಮಲತಾ ಪರ ಪ್ರಚಾರಕ್ಕೆ ಆಕ್ರೋಶ

ಮಂಡ್ಯ: ನಟ ದರ್ಶನ್ ಕಾರಿನ ಮೇಲೆ ಕಲ್ಲು ತೂರಾಟ, ಸುಮಲತಾ ಪರ ಪ್ರಚಾರಕ್ಕೆ ಆಕ್ರೋಶ
ದರ್ಶನ್ ಪ್ರಚಾರ
Published On :
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುತ್ತಿದ್ದ ನಟ ದರ್ಶನ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಗುರುವಾರ ನಡೆದಿದೆ.
ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಚಾಲಂಜಿಂಗ್‌ ಸ್ಟಾರ್‌ ದರ್ಶನ್‌ ಕಾರಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. 
ಇಂದು ನಾಗಮಂಗಲ ತಾಲೂಕು ಅಂಚೆಚಿಟ್ಟನ ಹಳ್ಳಿಯಲ್ಲಿ ಚಾಲಂಜಿಂಗ್‌ ಸ್ಟಾರ್‌ ದರ್ಶನ್‌ ಪ್ರಚಾರ ಮಡುತ್ತಿದ್ದಾಗ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಬೆಂಗಾವಲಾಗಿದ್ದ ಪೊಲೀಸರ ವಾಹನಗಳ ಮೇಲೂ ಕಲ್ಲು ಬಿದ್ದಿವೆ.
ದರ್ಶನ್ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುವಾಗ ಹಿಂದೆ ಬರುತ್ತಿದ್ದ ದರ್ಶನ್ ಕಾರಿನ ಮೇಲೆ ಕಲ್ಲು ತೂರಾಟ ನಡೆಸುವ ಮೂಲಕ ಸುಮಲತಾ ಪರ ಪ್ರಚಾರ ನಡೆಸುವ ನಟನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದೃಷ್ಟವಶಾತ್ ದರ್ಶನ್ ಗೆ ಯಾವದೇ ಹಾನಿಯಾಗಿಲ್ಲ.
ಈ ವೇಳೆ ಗುಂಪು ಚದುರಿಸಲು ಪೊಲೀರು ಲಾಠಿ ಪ್ರಹಾರ ನಡೆಸಿದರು. ಗುಂಪು ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಪೇದೆಗೆ ಗಾಯವಾಗಿದೆ. 
ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.